ಬೆಂಗಳೂರು [ಜು.30]: ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿರುವವರಿಗೆ ಹೆಚ್ಚಿನ ಸಚಿವ ಸ್ಥಾನ ನೀಡಬೇಕಾಗಿರುವುದರಿಂದ ಬಿಜೆಪಿಯಲ್ಲಿ ಈಗ ಕೇಳಿಬರುತ್ತಿರುವ ಸಚಿವ ಸ್ಥಾನದ ಹಲವು ಅಚ್ಚರಿಯ ಹೆಸರುಗಳಿಗೆ ಕೊಕ್‌ ನೀಡುವ ಸಾಧ್ಯತೆಯೂ ಇದೆ. 

ಈ ಬಗ್ಗೆ ಪಕ್ಷದ ಆಂತರಿಕ ಸಭೆಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಸ್ತಾಪಿಸಿದ್ದು, ಸರ್ಕಾರದ ಉಳಿವಿಗಾಗಿ ಪ್ರಮುಖರು ತ್ಯಾಗ ಮಾಡಬೇಕಾಗಿ ಬರಬಹುದು. 

ಎಲ್ಲ ಸಚಿವ ಸ್ಥಾನದ ಆಕಾಂಕ್ಷಿಗಳಿಗೂ ಅವಕಾಶ ಕಲ್ಪಿಸುವುದು ಕಷ್ಟವಾಗುತ್ತದೆ. ಅಂತಿಮವಾಗಿ ಸರ್ಕಾರ ಸುಭದ್ರವಾಗಿರಬೇಕು ಎಂಬ ಉದ್ದೇಶದಿಂದ ಈಗ ಕೇಳಿಬರುತ್ತಿರುವ ಹಲವು ಪ್ರಮುಖರ ಹೆಸರುಗಳು ಸಚಿವ ಸ್ಥಾನದ ಪಟ್ಟಿಯಿಂದ ಕೈಬಿಟ್ಟರೂ ಬೇಸರ ಮಾಡಿಕೊಳ್ಳಬೇಡಿ ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.