ಅಕ್ಕ ಸಮ್ಮೇಳನಕ್ಕೆ ಎಚ್‌ಡಿಕೆಗೆ ಆಹ್ವಾನ, ಅಮೆರಿಕದಲ್ಲಿ ಕನ್ನಡ ಡಿಂಡಿಮ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 15, Jul 2018, 8:24 PM IST
Karnataka CM H. D. Kumaraswamy chief guest of 10th AKKA WKC 2018 Dallas Texas
Highlights

ಬರೋಬ್ಬರಿ 10 ವರ್ಷಗಳ ನಂತರ ರಾಜ್ಯದ ಮುಖ್ಯಮಂತ್ರಿಯೊಬ್ಬರು ಅಮೆರಿಕದ ಅಕ್ಕ ಕನ್ನಡ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ಎಚ್.ಡಿ.ಕುಮಾರಸ್ವಾಮಿ 10ನೇ ಅಕ್ಕ ಸಮ್ಮೇಳನ ಉದ್ಘಾಟಿಸಲಿದ್ದಾರೆ.

ಬೆಂಗಳೂರು[ಜು.15]  ಅಮೆರಿಕದಲ್ಲಿ ಆಗಸ್ಟ್ 31ರಿಂದ ಸೆಪ್ಟೆಂಬರ್ 2ರವರೆಗೆ ನಡೆಯಲಿರುವ ಅಮೆರಿk ಕನ್ನಡ ಕೂಟಗಳ ಆಗರ [ಅಕ್ಕ] ಸಮ್ಮೇಳನವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ.  

ಅಕ್ಕ ಸಂಘಟನೆಯ ಸಂಸ್ಥಾಪಕರಾದ ಅಮರನಾಥ ಗೌಡ ಮತ್ತು ಅಧ್ಯಕ್ಷ ಶಿವಮೂರ್ತಿ ಸಿಎಂಗೆ ಆಹ್ವಾನ ನೀಡಿದ್ದಾರೆ. ಅಲ್ಲದೇ ಅಕ್ಕ ಸಮ್ಮೇಳನಕ್ಕೆ ಹೆಚ್ಚಿನ ಅನುದಾನಕ್ಕೂ ಆಯೋಜಕರು ಮನವಿ ಮಾಡಿದ್ದಾರೆ.  

ಎಲ್ಲಾದರೂ ಇರು ಎಂಥಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು. ಎಂಬ ರಾಷ್ಟ್ರಕವಿ ಕುವೆಂಪು ಅವರ ಆದರ್ಶಪೂರ್ವ ಕವಿತೆಯಂತೆ ಸಪ್ತಸಾಗರದಾಚಿನ ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರ ಕೂಟ ಅಕ್ಕ ಸಂಘಟನೆ ವಿಶ್ವಕನ್ನಡ ಸಮ್ಮೇಳನಕ್ಕೆ ಸಿದ್ಧತೆ ಆರಂಭಿಸಿದೆ. ದಶಮಾನೋತ್ಸವ ಸಂಭ್ರಮವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಕನ್ನಡಿಗರ ಹಿರಿಮೆ, ಕಲೆ, ಸಾಹಿತ್ಯ, ಗ್ರಾಮೀಣ ಸೊಗಡನ್ನು ಬಿಂಬಿಸಲಾಗುತ್ತದೆ.

ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಅಕ್ಕ ಸಮ್ಮೇಳನಕ್ಕೆ ಈ ಬಾರಿ ಹೊಸ ಧ್ಯೇಯ ವಾಕ್ಯವನ್ನು ಕೂಡ ರೂಪಿಸಲಾಗಿದ್ದು, "ಅಕ್ಕರೆಯ ಹತ್ತರ ಸಾರ್ಥಕ ಹೊತ್ತು" ಎಂಬ ಘೋಷ ವಾಕ್ಯದಡಿ ಕನ್ನಡ ಹಬ್ಬವನ್ನು ಆಚರಿಸಲಾಗುತ್ತಿದೆ.

ಅಮೆರಿಕದ ಟೆಕ್ಸಾಸ್‍ನ ಡಲ್ಲಾಸ್ ನಗರದಲ್ಲಿ ಈ ಬಾರಿ 10ನೇ ವಿಶ್ವ ಅಕ್ಕ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಅಕ್ಕ ಸಂಘಟನೆ ಪ್ರಾರಂಭಗೊಂಡು 20 ವರ್ಷ ಪೂರೈಸುತ್ತಿದ್ದು ಡಲ್ಲಾಸ್ ನಗರದ ಶೆರಟನ್ ಕನ್ವೆನ್ ಷನ್ ಸೆಂಟರ್ ನಲ್ಲಿ ಮೂರು ದಿನಗಳ ಕಾಲ ಸಮ್ಮೇಳನ ನಡೆಯಲಿದೆ. 

ನಿಮಗಿದೋ ಆಹ್ವಾನ

 

loader