ತುಮಕೂರು : ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿ ಇರುವುದಿಲ್ಲ ಎಂದು ಕಾಂಗ್ರೆಸ್ ನಾಯಕರೋರ್ವರು ಭವಿಷ್ಯ ನುಡಿದಿದ್ದಾರೆ. 

ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿ ಬಿಜೆಪಿ ಭರ್ಜರಿ ಬಹುಮತ ಗಳಿಸಿದೆ. ದೇಶದಲ್ಲಿ ಅಧಿಕಾರ ಹಿಡಿಯಲು bjp ನೇತೃತ್ವದ NDA ಒಕ್ಕೂಟ ಸಜ್ಜಾಗಿದೆ. ನರೇಂದ್ರ ಮೋದಿ ಮೇ 30 ರಂದು ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. 

ಮೋದಿಯನ್ನು ಹೊಗಳಿ ಕಾಂಗ್ರೆಸ್ ನಾಯಕ ರೋಷನ್ ಬೇಗ್ ಟ್ವೀಟ್

ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇರುವ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಮೋದಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಪತನವಾಗಲಿದೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಹೇಳಿದ್ದಾರೆ. 

ಮೋದಿ ಪ್ರಧಾನಿಯಾದ ಬಳಿಕ ರಾಜ್ಯದಲ್ಲಿ ಈ ಸರ್ಕಾರ ಇರದು. ಜೂನ್ ತಿಂಗಳು 10ರಂದು ದೋಸ್ತಿ ಸರ್ಕಾರ ಬೀಳಲಿದೆ ಎಂದು ಕಾಂಗ್ರೆಸ್ ನಾಯಕ ರಾಜಣ್ಣ ಹೇಳಿದರು.