ಸುಪ್ರೀಂ ಆದೇಶವನ್ನೇ ಸಿಎಸ್ ರತ್ನಪ್ರಭಾ ಕಡೆಗಣಿಸಿದರೆ?

First Published 12, Jun 2018, 6:53 PM IST
Karnataka: Complaint against Chief Secretary Ratnaprabha
Highlights

 ರಾಜ್ಯ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ವಿರುದ್ದ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ದಾಖಲಾಗಿದೆ.  ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರದ ಆರೋಪಲ್ಲಿ ದೂರು ದಾಖಲಾಗಿದೆ.

ಬೆಂಗಳೂರು ಜೂ. 12  ರಾಜ್ಯ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ವಿರುದ್ದ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ದಾಖಲಾಗಿದೆ.

ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರದ ಆರೋಪಲ್ಲಿ ದೂರು ದಾಖಲಾಗಿದೆ. ಉದ್ಯೋಗ ಮತ್ತು ತರಬೇತಿ ಇಲಾಖೆಯ‌ ಮಾಜಿ‌ ನೌಕರ ಶಂಕರ ದೇವೇಗೌಡ ಎಂಬುವರು ರತ್ನ ಪ್ರಭಾ ವಿರುದ್ಧ ದೂರು ದಾಖಲಿಸಿದ್ದಾರೆ.

ಸುಪ್ರೀಂ ಕೋರ್ಟ್ ಉದ್ಯೋಗ ಮತ್ತು ತರಬೇತಿ ಇಲಾಖೆಯ ಒಟ್ಟು 62 ಜನರಿಗೆ ಹಿಂಬಡ್ತಿ ನೀಡುವಂತೆ ಆದೇಶಿಸಿತ್ತು ಆದರೆ ಮುಖ್ಯ ಕಾರ್ಯದರ್ಶಿ ಆದೇಶವನ್ನು ಜಾರಿ ಮಾಡದೆ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ

loader