ಖಾತೆ ಹಂಚಿಕೆ ಕಗ್ಗಂಟು : ಸಿದ್ದರಾಮಯ್ಯ ನಾಟ್ ರೀಚೆಬಲ್

First Published 4, Jun 2018, 10:04 AM IST
Karnataka Congress in tug of war over PortFolio
Highlights

ಸಚಿವ ಸ್ಥಾನದ ಆಕಾಂಕ್ಷಿಗಳ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ಕಗ್ಗಂಟಾಗಿ ಪರಿಣಮಿಸಿರುವ ಖಾತೆ ಹಂಚಿಕೆಯು ಹೈಕಮಾಂಡ್ ಸಮ್ಮುಖದಲ್ಲೇ  ಬಗೆಹರಿಯಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣ ಗೊಂಡಿದೆ. 

ಬೆಂಗಳೂರು : ಸಚಿವ ಸ್ಥಾನದ ಆಕಾಂಕ್ಷಿಗಳ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ಕಗ್ಗಂಟಾಗಿ ಪರಿಣಮಿಸಿರುವ ಖಾತೆ ಹಂಚಿಕೆಯು ಹೈಕಮಾಂಡ್ ಸಮ್ಮುಖದಲ್ಲೇ  ಬಗೆಹರಿಯಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣ ಗೊಂಡಿದೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿದೇಶದಿಂದ ವಾಪಸಾಗಲು ಕಾಯುತ್ತಿದ್ದ ರಾಜ್ಯ ನಾಯಕತ್ವವು ಸೋಮವಾರ ಸಂಜೆ ಅಥವಾ ಮಂಗಳವಾರ ದೆಹಲಿಗೆ ತೆರಳುವ ಸಾಧ್ಯತೆಯಿದೆ. 

ಈ ನಡುವೆ ಸಚಿವ ಸ್ಥಾನದ ಆಕಾಂಕ್ಷಿಗಳು ರಾಜ್ಯ ನಾಯಕರ ಬಳಿ ತಮ್ಮ ಲಾಬಿ ಮುಂದುವರೆಸಿದ್ದಾರೆ. ಆದರೆ ಭಾನುವಾರ  ಬೆಳಗ್ಗೆಯೇ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ ಆಕಾಂಕ್ಷಿಗಳಿಗೆ ಸಿದ್ದರಾಮಯ್ಯ ಭೇಟಿ ಸಾಧ್ಯವಾಗಲಿಲ್ಲ. ಸಿದ್ದರಾಮಯ್ಯ ಅವರು ಗಂಟಲು ನೋವಿನಿಂದ ಯಾರ ಭೇಟಿಗೂ ಒಪ್ಪಲಿಲ್ಲ ಎಂದು ತಿಳಿದುಬಂದಿದೆ. 

ಹೀಗಾಗಿ ರಘು ಆಚಾರ್ ಪರ ಬ್ಯಾಟಿಂಗ್ ಮಾಡಲು ಬಂದಿದ್ದ ವಿಶ್ವಕರ್ಮ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಶಾಸಕ ಬಿ.ಸಿ. ಪಾಟೀಲ್ ಸೇರಿದಂತೆ ಹಲವು ನಾಯಕರು ಸಿದ್ದು ನಿವಾಸಕ್ಕೆ ಭೇಟಿ ನೀಡಿ ಭೇಟಿ ಸಾಧ್ಯವಾಗದೆ ವಾಪಸು ಹೋಗಿದ್ದಾರೆ.

loader