ಇಂದು [ಮಂಗಳವಾರ] ಬೆಳಗ್ಗೆಯಿಂದ ಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆಯ ಕದನಕ್ಕೆ ಅಭ್ಯರ್ಥಿಗಳ ಆಯ್ಕೆಗಾಗಿ ಕಾಂಗ್ರೆಸ್ ನಾಯಕರು ಸರಣಿ ಸಭೆ ಅಂತ್ಯವಾಗಿದೆ. ಸಭೆಯಲ್ಲಿ ಏನೆಲ್ಲ ನಡೆಯಿತು? ಇಲ್ಲಿದೆ ಸಂಪೂರ್ಣ ಮಾಹಿತಿ.
ಬೆಂಗಳೂರು, [ಅ.09]: ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ನಡೆದ ಕಾಂಗ್ರೆಸ್ ಸಭೆ ಅಂತ್ಯವಾಗಿದೆ. ಆದ್ರೆ, ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ.
ಇಂದು [ಮಂಗಳವಾರ] ಬೆಳಗ್ಗೆಯಿಂದ ಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆಯ ಕದನಕ್ಕೆ ಅಭ್ಯರ್ಥಿಗಳ ಆಯ್ಕೆಗಾಗಿ ಕಾಂಗ್ರೆಸ್ ನಾಯಕರು ಸರಣಿ ಸಭೆಗಳನ್ನು ಮಾಡಿದರು. ಉಪಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲು ಅಧಿಕೃತ ಒಪ್ಪಿಗೆ ನೀಡಲಾಗಿದೆ.
ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ: ಯಾರು? ಯಾವ ಕ್ಷೇತ್ರಕ್ಕೆ?
ಮಂಡ್ಯ, ರಾಮನಗರದಲ್ಲಿ ಜೆಡಿಎಸ್ ಬೆಂಬಲಿಸುವಂತೆ ಆಯಾ ಜಿಲ್ಲಾ ಕೈ ಮುಖಂಡರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಆದ್ರೆ, ಸಭೆಯಲ್ಲಿ ಜಮಖಂಡಿ ಕ್ಷೇತ್ರ ಹೊರತುಪಡಿಸಿ ಉಳಿದ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ. ಕೆಲವೆಡೆ ಮೈತ್ರಿ ವಿಚಾರ ಕೆಲವೆಡೆ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ.
ಶಿವಮೊಗ್ಗ, ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಯಾರನ್ನ ಆಯ್ಕೆ ಮಾಡಬೇಕು ಅನ್ನೋ ಚಿಂತೆಯಾದ್ರೆ, ರಾಮನಗರ ಮಂಡ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಸ್ಥಳೀಯ ಮಟ್ಟದಲ್ಲಿ ವಿರೋಧ ವ್ಯಕ್ತವಾಗ್ತಿದೆ.
