ಬೆಂಗಳೂರು : ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮತ್ತೆ ಬಿಜೆಪಿ ಸೇರುತ್ತಾರೆ ಎನ್ನುವ ಚರ್ಚೆ ಭುಗಿಲೆದ್ದಿದೆ.  ಶಾಸಕ ಆನಂದ್ ಸಿಂಗ್ ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. 

ರಾಜ್ಯದ ಪ್ರಭಾವಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜೊತೆ ಕಾಣಿಸಿಕೊಂಡಿದ್ದು ಈ ನಿಟ್ಟಿನಲ್ಲಿ ಬಿಜೆಪಿ ಸೇರುವ ವಿಚಾರಕ್ಕೆ ಮರುಜೀವ ಬಂದಂತಾಗಿದೆ.  

"

ಕಲ್ಲಡ್ಕ ಭಟ್ ರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ  ಶ್ರೀರಾಮ ವಿದ್ಯಾ ಕೇಂದ್ರದ ಕ್ರೀಡೋತ್ಸವದಲ್ಲಿ ಆನಂದ್ ಸಿಂಗ್ ಭಾಗಿಯಾಗಿದ್ದು, ತಡರಾತ್ರಿಯವರೆಗೂ ಕ್ರೀಡೋತ್ಸವದಲ್ಲಿ ಪಾಲ್ಗೊಂಡು ಕಲ್ಕಡ್ಕ ಭಟ್ ಜೊತೆಗಿದ್ದರು ಎನ್ನಲಾಗಿದೆ.  

ಕಲ್ಕಡ್ಕ ಪ್ರಭಾಕರ  ರಾಜ್ಯ ಬಿಜೆಪಿಯ ಮಟ್ಟಿಗೆ ಪ್ರಭಾವಿ ಆರ್ ಎಸ್ ಎಸ್ ಮುಖಂಡರಾಗಿದ್ದು ಅವರೊಂದಿಗೆ ಕಾಣಿಸಿಕೊಂಡ ಸಿಂಗ್ ಸಂಪುಟ ವಿಸ್ತರಣೆಯಾಗದ ಹಿನ್ನೆಲೆಯಲ್ಲಿ ಮತ್ತೆ ಬಿಜೆಪಿ ಸೇರಲು ಸಿದ್ದವಾಗಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ. 

ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜೊತೆ  ದೀರ್ಘ ಮಾತುಕತೆಯನ್ನು ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದೆ.