ನವದೆಹಲಿ[ಜು.31]: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ವಿಶ್ವಾಸಮತ ಯಾಚನೆಯ ಸಂದರ್ಭದಲ್ಲಿ ವಿಧಾನಸಭಾ ಅಧಿವೇಶನದಿಂದ ದೂರವೇ ಉಳಿದ 14 ಅತೃಪ್ತ ಶಾಸಕರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದ ಹಿನ್ನೆಲೆಯಲ್ಲಿ ಈ ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಪ್ರದೇಶ ಕಾಂಗ್ರೆಸ್ ಕಳುಹಿಸಿದ್ದ ಪ್ರಸ್ತಾವನೆಯನ್ನು ಎಐಸಿಸಿ ಒಪ್ಪಿಕೊಂಡಿರುವುದಾಗಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆನಂದ್ ಸಿಂಗ್, ಎಂಟಿಬಿ ನಾಗರಾಜ್, ಡಾ.ಸುಧಾಕರ್, ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ರೋಷನ್ ಬೇಗ್, ಪ್ರತಾಪ್‌ಗೌಡ ಪಾಟೀಲ್, ಶ್ರೀಮಂತ ಪಾಟೀಲ್, ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಆರ್.ಶಂಕರ್, ಮುನಿರತ್ನರನ್ನು ಪಕ್ಷದಿಂದ ಉಚ್ಚಾಟಿಸಲಾಗಿ