ಲೋಕಸಭೆಯಲ್ಲೂ ಪ್ರತಿಧ್ವನಿಸಿದ ಕರ್ನಾಟಕ ರಾಜಕೀಯ ವಿಪ್ಲವ| ಕರ್ನಾಟಕ ರಾಜಕೀಯ ಬೆಳವಣಿಗೆ ಕುರಿತು ಲೋಕಸಭೆಯಲ್ಲಿ ಚರ್ಚೆ| ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ| ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ತಂತ್ರ ಎಂದ ಕಾಂಗ್ರೆಸ್| ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡದ ಆರೋಪ| ಕೈ ನಾಯಕರಿಗೆ ಸೂಕ್ತ ತಿರುಗೇಟು ನೀಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್| ಕಾಂಗ್ರೆಸ್ ಶಾಸಕರಿಗೆ ರಾಜೀನಾಮೆ ರುಚಿ ತೋರಿಸಿದ್ದು ರಾಹುಲ್ ಎಂದ ರಾಜನಾಥ್|

ನವದೆಹಲಿ(ಜು.08): ಕರ್ನಾಟಕದಲ್ಲಿನ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಕುರಿತು ಲೋಕಸಭೆಯಲ್ಲೂ ಚರ್ಚೆಯಾಗಿದ್ದು, ರಾಜ್ಯ ರಾಜಕೀಯ ನಾಯಕರು ಕಚ್ಚಾಡಿಕೊಳ್ಳುವ ರೀತಿಯಲ್ಲೇ ಲೋಕಸಭೆಯಲ್ಲೂ ಕಾಂಗ್ರೆಸ್-ಬಿಜೆಪಿ ನಾಯಕರು ಪರಸ್ಪರ ಕೆಸರೆರಚಿಕೊಂಡಿದ್ದಾರೆ.

"

ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ ನಡೆಸಿದ್ದು, ಇದಕ್ಕೆ ಬಿಜೆಪಿ ಕೇಂದ್ರ ನಾಯಕರ ಕುಮ್ಮಕ್ಕು ಇದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು.

Scroll to load tweet…

ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜೀನಾಮೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಯಾವುದೇ ರೀತಿಯ ಕುದುರೆ ವ್ಯಾಪಾರದಲ್ಲಿ ನಿರತವಾಗಿಲ್ಲ ಎಂದು ಸ್ಪಷ್ಟಪಡಿಸಿದ ರಾಜನಾಥ್ ಸಿಂಗ್, ಕಾಂಗ್ರೆಸ್ ಶಾಸಕರಿಗೆ ರಾಜೀನಾಮೆ ರುಚಿ ತೋರಿಸಿದವರು ರಾಹುಲ್ ಗಾಂಧಿ ಎಂದು ಲೇವಡಿ ಮಾಡಿದರು.

Scroll to load tweet…

ರಾಹುಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇ ತಡ ಆ ಪಕ್ಷದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ. ಇದೇ ಕಾರಣಕ್ಕೆ ಕರ್ನಾಟಕ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದು, ಇದಕ್ಕೂ ಬಿಜೆಪಿಗೂ ಸಂಬಂಧವಿಲ್ಲ ಎಂದು ರಾಜನಾಥ್ ಸ್ಪಷ್ಟಪಡಿಸಿದರು.