ರಾಜ್ಯದ ಎಲ್ಲ ದರ್ಶಿನಿಗಳು, ಬಾರ್ ಆ್ಯಂಡ್ ರೆಸ್ಟೋರೆಂಟ್, ಹೋಟೆಲ್, ಪಬ್, ಕ್ಲಬ್ ಹಾಗೂ ಎಲ್ಲ ಸಾರ್ವಜನಿಕ ಸ್ಥಳಗಳನ್ನು ‘ಧೂಮಪಾನ ಮುಕ್ತ ಪ್ರದೇಶ’ ಎಂದು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇದಕ್ಕೆ ಸಂಬಂಧಿಸಿದಂತೆ ಸುಳಿವೊಂದನ್ನು ಕೊಟ್ಟಿದ್ದಾರೆ.
ಬೆಂಗಳೂರು, [ಜ.04]: ರಾಜ್ಯದಲ್ಲಿ ಧೂಮಪಾನ ಸಂಪೂರ್ಣವಾಗಿ ನಿಷೇಧಿಸುವುದು ಕಷ್ಟದ ಕೆಲಸ. ಆದರೂ, ಆ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ತಿಳಿಸಿದರು.
ಮಲ್ಲೇಶ್ವರದ ಬಿಬಿಎಂಪಿ ಐಪಿಪಿ ಕೇಂದ್ರದಲ್ಲಿ ಶುಕ್ರವಾರ ಧೂಮಪಾನ ಮುಕ್ತ ಬೆಂಗಳೂರು ಅಭಿಯಾನದ ವರದಿ ಹಾಗೂ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದ ಬಳಿಕ ಅವರು ಮಾತನಾಡಿದರು.
ಧೂಮಪಾನ ಹಾಗೂ ತಂಬಾಕು ಸೇವಿಸುವುದು ಅಪಾಯ ಎಂಬುದರ ಬಗ್ಗೆ ಎಲ್ಲರಿಗೂ ಅರಿವಿದ್ದರೂ ಕೂಡಾ ಅದನ್ನು ಸೇವಿಸುವುದು ಜಗತ್ತಿನ ವಿಸ್ಮಯವೇ ಸರಿ ಎಂದು ಕಳವಳ ವ್ಯಕ್ತಪಡಿಸಿದರು.
ಬೆಂಗಳೂರನ್ನು ಧೂಮಪಾನ ಮುಕ್ತ ನಗರವನ್ನಾಗಿ ಮಾಡಲು ಬಿಬಿಎಂಪಿ, ಪೊಲೀಸ್ ಹಾಗೂ ಕೆಲ ಎನ್‌ಜಿಓಗಳ ಸಹಯೋಗದಲ್ಲಿ ಕಳೆದ ವರ್ಷ ಅಭಿಯಾನ ಪ್ರಾರಂಭಿಸಿದ್ದು, ಆ ಬಗ್ಗೆ ಸಮೀಕ್ಷೆ ಕೂಡಾ ನಡೆಸಲಾಗುತ್ತಿದೆ.
ಅದರಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹಲವು ಅಭಿಯಾನ ನಡೆಸಲಾಗುತ್ತಿದೆ. ಕಳೆದ ಬಾರಿ ‘ಧೂಮಪಾನ ನಿಷೇಧಿಸಲಾಗಿದೆ’ ಎಂಬ ಫಲಕಗಳನ್ನು ಶೇ.10 ರಷ್ಟು ಕಡೆ ಅಳವಡಿಸಿದ್ದು, ಈ ಬಾರಿ ಶೇ.21ಕ್ಕೆ ಹೆಚ್ಚಳವಾಗಿದೆ ಎಂದು ತಿಳಿಸಿದರು.
ಇದೇ ಸುದ್ದಿಯನ್ನು ಇಂಗ್ಲೀಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಾಜ್ಯದಲ್ಲಿ ಶೇ.72 ರಷ್ಟು ಸಾಂಕ್ರಾಮಿಕವಲ್ಲದ ಕಾಯಿಲೆಗಳಿಗೇ ಹೆಚ್ಚು ಜನ ಬಲಿಯಾಗುತ್ತಿದ್ದಾರೆ. ಈ ಪೈಕಿ ಶಾಲಾ-ಕಾಲೇಜುಗಳ ಬಳಿ, ಚಿತ್ರಮಂದಿರ, ಆಸ್ಪತ್ರೆ, ಹೋಟೆಲ್, ಸಾರ್ವಜನಿಕ ಸ್ಥಳ, ಬಾರ್‌ಗಳ ಬಳಿ ಹೆಚ್ಚು ತಂಬಾಕು ಮಾರಾಟ ಮಾಡುವ ಅಂಗಡಿಗಳಿಗೆ ಕಡಿವಾಣ ಹಾಕಬೇಕಿದೆ.
ಬಿಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳು ಈಗಾಗಲೇ ಧೂಮಪಾನ ಮುಕ್ತ ನಗರವನ್ನಾಗಿ ಮಾಡಲು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಹೇಳಿದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 5, 2019, 10:15 AM IST