ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಸಾಲವನ್ನು ಶೀಘ್ರ ಮನ್ನಾ ಮಾಡಬೇಕು. ಇದರಿಂದ ರೈತರಿಗೆ ಒಳ್ಳೆಯದಾಗುತ್ತದೆ ಎಂದು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ನುಡಿದರು.
ಬೆಂಗಳೂರು : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಸಾಲವನ್ನು ಶೀಘ್ರ ಮನ್ನಾ ಮಾಡಬೇಕು. ಇದರಿಂದ ರೈತರಿಗೆ ಒಳ್ಳೆಯದಾಗುತ್ತದೆ ಎಂದು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ನುಡಿದರು.
ಸ್ಥಳೀಯ ರಾಜೇಂದ್ರ ಗಂಜ್ (ಎಪಿಎಂಸಿ) ಆವರಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಎರಡನೇ ದಿನ 2 ಟನ್ ಭಾರವಾದ ಕಲ್ಲು ಎಳೆಯುವ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ, ರೈತರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳು ಆದಷ್ಟುಬೇಗ ಸಾಲ ಮನ್ನಾ ಮಾಡಿದರೆ ರೈತರಿಗೆ ಅನುಕೂಲವಾಗುತ್ತೆ ಎಂದು ತಿಳಿಸಿದರು.

Last Updated 29, Jun 2018, 9:02 AM IST