ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಕ್ರಮವನ್ನು ಖಂಡಿಸಿರುವ ಶಿವಸೇನೆ, ರಾಜ್ಯ ಸರ್ಕಾರವನ್ನು ವಜಾಮಾಡಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕೆಂದು ಕೇಂದ್ರವನ್ನು ಒತ್ತಾಯಿಸಿದೆ.
ನವದೆಹಲಿ: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಕ್ರಮವನ್ನು ಖಂಡಿಸಿರುವ ಶಿವಸೇನೆ, ರಾಜ್ಯ ಸರ್ಕಾರವನ್ನು ವಜಾಮಾಡಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕೆಂದು ಕೇಂದ್ರವನ್ನು ಒತ್ತಾಯಿಸಿದೆ.
ಈ ಬೇಡಿಕೆಯು ಸಂವಿಧಾನ ವಿರೋಧಿಯಾಗಿರುವುದರಿಂದ ಕರ್ನಾಟಕ ಸರ್ಕಾರವನ್ನು ವಜಾಮಾಡಬೇಕು ಹಾಗೂ ಅಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಬೇಕು ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರವನ್ನು ಮುಂದಿಟ್ಟುಕೊಂಡು ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದಾದಲ್ಲಿ, ನಾಳೆ ಪ್ರತ್ಯೇಕ ರಾಷ್ಟ್ರದ ಬೇಡಿಯನ್ನಿಡಬಹುದು; ಮುಖ್ಯಮಂತ್ರಿಗೆ ಪ್ರಧಾನಿಯ ಮಾನ್ಯತೆಯನ್ನು ಬಯಸಬಹುದು, ಎಂದು ರಾವತ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಕರ್ನಾಟಕಕ್ಕೆ ಪ್ರತ್ಯೇಕ ನಾಡಧ್ವಜ ಹೊಂದುವ ಬಗ್ಗೆ ಕಾನೂನಾತ್ಮಕ ಅಂಶಗಳನ್ನು ಅವಲೋಕಿಸಲು ರಾಜ್ಯ ಸರಕಾರವು 9 ಮಂದಿಯ ಸಮಿತಿಯನ್ನು ರಚಿಸಿದೆ.
