ಬೆಂಗಳೂರು [ಆ.17]: ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದ ರಾಜ್ಯ ತತ್ತರಿಸಿದೆ. ಪ್ರವಾಹ ಪರಿಸ್ಥಿತಿಯಿಂದ ಜನರು ಆಸ್ತಿ ಪಾಸ್ತಿ ಕಳೆದುಕೊಂಡು ನೆಲೆ ಇಲ್ಲದೇ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನೆರವಿನ ಅಗತ್ಯವಿದ್ದು, ಸರ್ಕಾರದಿಂದ ಅಗತ್ಯ ಪರಿಹಾರ ಕಾರ್ಯ ನಡೆಯುತ್ತಿದೆ. 

ಇದೇ ವೇಳೆ ನೆರೆ ಪೀಡಿತರ ನೆರವಿಗಾಗಿ ಅನೇಕರು ಸ್ಪಂದಿಸುತ್ತಿದ್ದಾರೆ. ಹಲವು ನಾಯಕರು ದೇಣಿಗೆ ನೀಡುವ ಮೂಲಕ ನೆರೆ ಪೀಡಿತರಿಗೆ ನೆರವಾಗುತ್ತಿದ್ದಾರೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಹ ನೆರವಿನ ಹಸ್ತ ಚಾಚುತಿದ್ದಾರೆ. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜ್ಯ ತೀವ್ರ ಪ್ರವಾಹದಿಂದ ತತ್ತರಿಸಿದೆ. ಹೀಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರು. ನೀಡಲು ತೀರ್ಮಾನ ಮಾಡಿದ್ದೇನೆ. ಸದ್ಯದಲ್ಲೇ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೂ ಪತ್ರ ಬರೆಯುತ್ತೇನೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದರು.