ಬೆಂಗಳೂರು [ಜು.22] :  ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಬಿಎಸ್‌ಪಿ ಶಾಸಕ ಎನ್‌.ಮಹೇಶ್‌ ಅವರಿಗೆ ಪಕ್ಷದ ವರಿಷ್ಠ ನಾಯಕಿ ಮಾಯಾವತಿ ಸೂಚನೆ ನೀಡಿದ್ದಾರೆ. 

ಬಿಎಸ್‌ಪಿ ನಾಯಕಿ ಮಾಯಾವತಿ ನಿರ್ದೇಶನದ ಮೇರೆಗೆ ತಾವು ತಟಸ್ಥವಾಗಿರಲು ನಿರ್ಧರಿಸಿದ್ದು, ಸೋಮವಾರ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಭಾನುವಾರ ಬೆಳಗ್ಗೆಯಷ್ಟೇ ಮಹೇಶ್‌ ಅವರು ಹೇಳಿಕೆ ನೀಡಿದ್ದರು. 

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

ಅದರ ಬೆನ್ನಲ್ಲೇ ಜೆಡಿಎಸ್‌ ನಾಯಕರು ಮಾಯಾವತಿ ಅವರನ್ನು ಸಂಪರ್ಕಿಸಿ ಬೆಂಬಲ ನೀಡುವಂತೆ ಮನವಿ ಮಾಡಿದ್ದರು. ಆ ಮನವಿಗೆ ಸ್ಪಂದಿಸಿದ ಮಾಯಾವತಿ ಅವರು ಬೆಂಬಲ ನೀಡುವಂತೆ ತಮ್ಮ ಪಕ್ಷದ ಶಾಸಕ ಮಹೇಶ್‌ ಅವರಿಗೆ ಸಂದೇಶ ರವಾನಿಸಿದ್ದಾರೆ.