ಬೆಂಗಳೂರು, [ಜೂನ್.03]: ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರಿಗೆ ಕೊನೆಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ.

ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಶರವಣ ಅವರನ್ನು ನೇಮಕ ಮಾಡಿ ಇಂದು [ಸೋಮವಾರ] ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಷ್ಟೇ ಅಲ್ಲದೇ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಕೂಡಲೇ ಜಾರಿಗೆ ಬರುವಂತೆ ಆದೇಶ ಮಾಡಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು.

ಶರವಣ ಅವರು ದೇವೇಗೌಡ ಮತ್ತವರ ಕುಟುಂಬಕ್ಕೆ ಬಹಳ ಆಪ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವುದು ಪಕ್ಕಾ ಎನ್ನಲಾಗಿತ್ತು. ಆದ್ರೆ, ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಿದ್ದರಿಂದ ಶರವಣ ಅವರಿಗೆ ಸಚಿವ ಸ್ಥಾನ ಕೈತಪ್ಪಿತ್ತು. ಇದೀಗ ಅವರಿಗೆ ನಿಗಮ ಮಂಡಳಿ ಸ್ಥಾನ ನೀಡಲಾಗಿದೆ.