ಮೈಸೂರು, [ಆ.22]: ನೂತನ ಸಚಿವ ವಿ. ಸೋಮಣ್ಣ ಅವರನ್ನು  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ.

ದಸರಾ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಕೇವಲ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಇಂದು [ಗುರುವಾರ] ಆದೇಶ ಹೊರಡಿಸಿದೆ.

ಪೂಜೆ ಮಾಡುವುದಲ್ಲಿ ಬಿಜೆಪಿ ನಾಯಕರ ಪ್ರತಿಷ್ಠೆ: ಮೈಸೂರು DC ತಲೆದಂಡ!

ಈ ಬಾರಿ ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ದಸರಾ ಸಿದ್ಧತೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಅವಶ್ಯಕತೆ ಇರುವುದರಿಂದ ರಾಜ್ಯ ಸರ್ಕಾರ ಕೇವಲ ಮೈಸುರು ಜಿಲ್ಲಾ ಉಸ್ತುವಾರಿ ಮಂತ್ರಿಯನ್ನು ನೇಮಕ ಮಾಡಿದೆ.

ಬಿಜೆಪಿ ನಾಯಕರುಗಳ ನಡುವೆಯೇ ಭಿನ್ನಾಭಿಪ್ರಾಯ ಎದ್ದು ಕಂಡಿತು. ಈ ಹಿನ್ನೆಲೆಯಲ್ಲಿ ಸೋಮಣ್ಣ ಅವರನ್ನು ಮೈಸೂರು ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ.

ವಿ. ಸೋಮಣ್ಣ ಅವರು ಬೆಂಗಳೂರಿನ ಗೋವಿಂದರಾಜ್ ನಗರ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದು, ಮೊನ್ನೇ ಬಿಎಸ್ ವೈ ಸಂಪುಟದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.