ಬೆಂಗಳೂರು [ಜು.28] :  ನೂತನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸರ್ಕಾರದ ವಿಶ್ವಾಸಮತ ಯಾಚನೆ ಅಂಗವಾಗಿ ವಿಧಾನಮಂಡಲದ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಮತ್ತು ಮಂಗಳವಾರ ವಿಧಾನಸೌಧ ಸುತ್ತಮುತ್ತ ಎರಡು ಕಿ.ಮೀ ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ವಿಧಾನಮಂಡಲದ ಅಧಿವೇಶನದ ವೇಳೆ ಕೆಲವು ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಸಹ ಪ್ರತಿಭಟನೆ ನಡೆಸಬಹುದು. ಈ ಹಿನ್ನೆಲೆಯಲ್ಲಿ ಅಧಿವೇಶನದ ಸಂದರ್ಭದಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. 

ಹೀಗಾಗಿ ವಿಧಾನಸೌಧ ವ್ಯಾಪ್ತಿ ಜು.29ರಿಂದ ಬೆಳಗ್ಗೆ 6 ಗಂಟೆಯಿಂದ 30 ಸಂಜೆ 6 ಗಂಟೆವರೆಗೆ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಅಲೋಕ್‌ ಕುಮಾರ್‌ ಪ್ರಕಟಣೆಯಲ್ಲಿ ಹೇಳಿದ್ದಾರೆ.