ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ

First Published 16, Jun 2018, 7:42 AM IST
Karnataka Govt Order To Transfer Teacher
Highlights

ವಿಧಾನಸಭೆ ಮತ್ತು ಪರಿಷತ್ತಿನ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಿಕ್ಷಕರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ವರ್ಗಾವಣೆಗೆ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. 

ಬೆಂಗಳೂರು :  ವಿಧಾನಸಭೆ ಮತ್ತು ಪರಿಷತ್ತಿನ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಿಕ್ಷಕರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ವರ್ಗಾವಣೆಗೆ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಜೂ.18ರಿಂದ ವರ್ಗಾವಣೆ ಪ್ರಕ್ರಿಯೆಗಳು ಆರಂಭಗೊಳ್ಳಲಿವೆ.

ಪರಿಷ್ಕೃತ ವೇಳಾಪಟ್ಟಿಯಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಹಾಗೂ ಉಪನ್ಯಾಸಕರ ವರ್ಗಾವಣೆ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್‌.ಮಹೇಶ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶಿಕ್ಷಕರಿಗೆ ಕಷ್ಟ:  2018-19ನೇ ಸಾಲಿನ ಶೈಕ್ಷಣಿಕ ವರ್ಷಗೊಂಡಿರುವ ಮಧ್ಯೆಯೇ ವರ್ಗಾವಣೆ ಕೈಗೊಂಡರೆ ಶಿಕ್ಷಕರು ಮಾತ್ರವಲ್ಲದೆ, ವಿದ್ಯಾರ್ಥಿಗಳಿಗೂ ತೊಂದರೆ ಉಂಟಾಗಲಿದೆ. ಶೈಕ್ಷಣಿಕ ವರ್ಷದ ಮಧ್ಯೆ ಶಿಕ್ಷಕರು ತಮ್ಮ ಸಂಸಾರದ ಸಮೇತವಾಗಿ ಬೇರೆ ಪ್ರದೇಶಕ್ಕೆ ಹೋಗಿ ಕರ್ತವ್ಯಕ್ಕೆ ಹಾಜರಾಗುವುದ ಕೂಡ ಕಷ್ಟವಾಗಲಿದೆ.

ಕೌನ್ಸೆಲಿಂಗ್‌ ನಡೆಸಿ ಮುಂದಿನ ಬೇಸಿಗೆ ರಜೆ ವೇಳೆಗೆ ವರದಿ ಮಾಡಿಕೊಳ್ಳಲು ಅವಕಾಶ ಕಲ್ಪಿಸುವುದು ಸೂಕ್ತ ಎಂದು ಕೆಲವು ಶಿಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ವರ್ಷ 77 ಸಾವಿರ ಶಿಕ್ಷಕರು ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿದ್ದರು.

loader