ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ. ಇನ್ಮುಂದೆ ಹೆಂಡತಿ, ಮಕ್ಕಳ ಮೇಲೆ ದೌರ್ಜನ್ಯ ನಡೆಸಿದರೆ ಅಥವಾ ಕುಟುಂಬವನ್ನು ನಿರ್ಲಕ್ಷಿಸಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸುತ್ತೋಲೆ ಹೊರಡಿಸಿದೆ. ಆ ಸುತ್ತೋಲೆ ಪ್ರತಿ ಸುವರ್ಣನ್ಯೂಸ್​ಗೆ ಲಭ್ಯವಾಗಿದೆ.

ಬೆಂಗಳೂರು (ಫೆ.09): ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ. ಇನ್ಮುಂದೆ ಹೆಂಡತಿ, ಮಕ್ಕಳ ಮೇಲೆ ದೌರ್ಜನ್ಯ ನಡೆಸಿದರೆ ಅಥವಾ ಕುಟುಂಬವನ್ನು ನಿರ್ಲಕ್ಷಿಸಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸುತ್ತೋಲೆ ಹೊರಡಿಸಿದೆ. ಆ ಸುತ್ತೋಲೆ ಪ್ರತಿ ಸುವರ್ಣನ್ಯೂಸ್​ಗೆ ಲಭ್ಯವಾಗಿದೆ.

ಸರ್ಕಾರಿ ನೌಕರರು ಹೆಂಡತಿ, ಮಕ್ಕಳ ಮೇಲೆ ದೌರ್ಜನ್ಯ ನಡೆಸುವಂತಿಲ್ಲ. ತನ್ನ ಕುಟುಂಬಗಳನ್ನು ನಿರ್ಲಕ್ಷಿಸುವಂತಿಲ್ಲ. ಕೇವಲ ವೃತ್ತಿಯಲ್ಲಿ ಮಾತ್ರ ಶಿಸ್ತಿನಿಂದ ಇದ್ದರೆ ಸಾಲದು. ಕುಟುಂಬದ ಸದಸ್ಯರನ್ನೂ ಗೌರವದಿಂದ ನಡೆಸಿಕೊಳ್ಳಬೇಕು. ಹೆಂಡತಿ, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬೇಕು.ತಂದೆ-ತಾಯಿ ಜೊತೆಯೂ ಗೌರವದಿಂದ ನಡೆದುಕೊಳ್ಳಬೇಕು. ಇಲ್ಲದಿದ್ದರೆ ಅಂತಹ ಸರ್ಕಾರಿ ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ ನೀಡಿದೆ.

ಕುಟುಂಬ ನಿರ್ಲಕ್ಷದ ಬಗ್ಗೆ ನೌಕರರ ಕುಟುಂಬಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ

ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಸುತ್ತೋಲೆ ಹೊರಡಿಸಲಾಗಿದೆ.