ಕಳೆದ 2 ದಿನಗಳಿಂದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಉತ್ತರ ಕನ್ನಡ ಹೊತ್ತಿ ಉರಿಯುತ್ತಿದೆ. ಸದ್ಯ ಇಲ್ಲಿನ ಕುಮಟಾದಲ್ಲಿ ಗಲಭೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಬೆಂಗಳೂರು(ಡಿ.13): ಕುಮಟಾದಲ್ಲಿ ನಡೆದ ಪರೇಶ್ ಮೇಸ್ತಾ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ'ಗೆ ವಹಿಸಲಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರ್. ರಾಮಲಿಂಗಾರೆಡ್ಡಿ' ಪರೇಶ್ ಮೇಸ್ತಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಸನ್ನಡತೆ ಆಧಾರದಲ್ಲಿ ಕೈದಿಗಳ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು'​ ಮೇಸ್ತ ಕುಟುಂಬದ ಒತ್ತಾಯದ ಹಿನ್ನೆಲೆ ಸಿಬಿಐ ತನಿಖೆಗೆ ವಹಿಸಲಾಗುವುದು' ಎಂದು ತಿಳಿಸಿದರು. ಕಳೆದ 2 ದಿನಗಳಿಂದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಹೊತ್ತಿ ಉರಿಯುತ್ತಿದೆ. ಸದ್ಯ ಇಲ್ಲಿನ ಕುಮಟಾದಲ್ಲಿ ಗಲಭೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಸದ್ಯ ಕಾರವಾರ ಕುಮಟಾ, ಮುಂಡಗೋಡ ಪಟ್ಟಣದಲ್ಲಿ ಸೂಕ್ತ ಬಿಗಿ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಮೆಸ್ತಾ ಹತ್ಯಾ ಪ್ರಕರಣ ಆಡಳಿತರೂಢ ಹಾಗೂ ಪ್ರತಿಪಕ್ಷ ಪಕ್ಷಗಳ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.