ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಮೊದಲ ಚಳಿಗಾಲ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಯಾವಾಗ? ಇಲ್ಲಿದೆ ವಿವರ.

ಬೆಂಗಳೂರು, [ನ.14]: ಮೈತ್ರಿ ಸರ್ಕಾರದ ಮೊದಲ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುಲಿದೆ.

ಡಿಸೆಂಬರ್​​ 10 ರಿಂದ 21ರ ವರೆಗೆ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಧಿವೇಶನಕ್ಕೆ ದಿನಾಂಕ ನಿಗದಿ ಆಗಿರುವ ಕುರಿತು ಮುಖ್ಯಮಂತ್ರಿ ಸಚಿವಾಲಯ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದೆ.

ರಾಜ್ಯಪಾಲರ ಒಪ್ಪಿಗೆ ಸಿಕ್ಕ ಬಳಿಕ ರಾಜ್ಯ ಸರ್ಕಾರ ಅಧಿಕೃತವಾಗಿ ದಿನಾಂಕ ಘೋಷಣೆ ಮಾಡಲಿದೆ. 

ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷ ಬಿಜೆಪಿ ನಾಯಕರು ಮತ್ತು ಮೈತ್ರಿ ಸರ್ಕಾರದ ಕಾಂಗ್ರೆಸ್​​, ಜೆಡಿಎಸ್​​ ಸಚಿವರು, ಭಾಗಿಯಾಗಿ ಚರ್ಚೆ ನಡೆಸಲಿದ್ದಾರೆ.