ಹೊಸ ವರ್ಷಾಚರಣೆ ವೇಳೆ ಮದ್ಯ ನಿಷೇಧ ಸಂಬಂಧ ಸರ್ಕಾರದ ನಿಲುವು ತಿಳಿಸಲು ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.
ಬೆಂಗಳೂರು (ಡಿ.13): ಹೊಸ ವರ್ಷಾಚರಣೆ ವೇಳೆ ಮದ್ಯ ನಿಷೇಧ ಸಂಬಂಧ ಸರ್ಕಾರದ ನಿಲುವು ತಿಳಿಸಲು ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.
ಹೊಸ ವರ್ಷಾಚರಣೆ ವೇಳೆ ಮದ್ಯ ನಿಷೇಧ ಕೋರಿ ನಾಗೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಹೊಸ ವರ್ಷಾಚರಣೆ ವೇಳೆ ಲೈಂಗಿಕ ದೌರ್ಜನ್ಯ ನಡೆದಿವೆ. ಇದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿಗೆ ಕೆಟ್ಟ ಹೆಸರು ಬರುತ್ತದೆ. ಹೊಸ ವರ್ಷಾಚರಣೆ ಅವಘಡಗಳಿಗೆ ಮದ್ಯಪಾನವೇ ಕಾರಣ. ಹೀಗಾಗಿ ಡಿ.31, ಜ. 1 ರಂದು ಮದ್ಯ ನಿಷೇಧ ಮಾಡಬೇಕೆಂದು ಮನವಿ ಸಲ್ಲಿಸಿದ್ದರು. ನ್ಯಾಯಾಲಯ ವಿಚಾರಣೆಯನ್ನು ಡಿ.15 ಕ್ಕೆ ಮುಂದೂಡಿದೆ.
