ಬೆಂಗಳೂರು (ಜು. 23): ದೇಶದ್ಯಾಂತ ಭಾರೀ ಕುತೂಹಲ ಕೆರಳಿಸಿದ್ದ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಕೊನೆಗೂ ಸೋಲಿನಲ್ಲಿ ಅಂತ್ಯವಾಗಿದೆ.

ಮಂಗಳವಾರ ನಡೆದ ವಿಶ್ವಾಸ ಮತಯಾಚನೆಯಲ್ಲಿ 6 ಮತಗಳಿಂದ ಎಚ್.ಡಿ. ಕುಮಾರಸ್ವಾಮಿ ಬಹುಮತ ಕಳೆದುಕೊಂಡಿದ್ದಾರೆ.

ಬಹುಮತ ಸಾಬೀತು ಪಡಿಸಲು ವಿಫಲರಾದ ಕೆಲವೇ ಕ್ಷಣಗಳಲ್ಲಿ,  ರಾಜಭವನಕ್ಕೆ ತೆರಳಿದ  ಎಚ್.ಡಿ. ಕುಮಾರಸ್ವಾಮಿ ರಾಜ್ಯಪಾಲ ವಾಜುಭಾಯಿ ವಾಲಾರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಕ್ಷಣ-ಕ್ಷಣದ ಅಪ್ಡೇಟ್ಸ್https://kannada.asianetnews.com/live-tv

2018  ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದು,  104 ಸ್ಥಾನ ಪಡೆದಿದ್ದ ಬಿಜೆಪಿಯು ಬಹುಮತ ಸಾಬೀತು ಪಡಿಸಲು ವಿಫಲವಾಗಿತ್ತು.

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟವು ಸರ್ಕಾರವನ್ನು ರಚಿಸಿದ್ದು, ಎಚ್.ಡಿ. ಕುಮಾರಸ್ವಾಮಿ 2018 ಮೇ 23ರಂದು ಅದ್ದೂರಿ ಕಾರ್ಯಕ್ರಮದಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.