Asianet Suvarna News Asianet Suvarna News

ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ ಎಚ್ಚರಿಕೆ

ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆ  ಎಚ್ಚರಿಕೆ ನೀಡಲಾಗಿದೆ. 

Karnataka Heavy Monsoon rain continues to lash In Many District Karnataka
Author
Bengaluru, First Published Jul 12, 2019, 9:52 AM IST

ಬೆಂಗಳೂರು [ಜು.12] :  ರಾಜ್ಯದ ಕರಾವಳಿ, ಮಲೆನಾಡು ಹಾಗೂ ಬೆಳಗಾವಿ ಜಿಲ್ಲೆಯ ಕೆಲ ಭಾಗಗಳಲ್ಲಿ ಗುರುವಾರವೂ ಧಾರಾಕಾರ ಮಳೆಯಾಗಿದ್ದು, ಪ್ರವಾಹ ಭೀತಿ ಎದುರಾಗಿದೆ. ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು ಒಟ್ಟಾರೆ 41 ಗ್ರಾಮಗಳು ಮತ್ತು ಎರಡು ದ್ವೀಪಗಳು ಸಂಪರ್ಕ
ಕಡಿದುಕೊಂಡಿವೆ. 

ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಎರಡ್ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕರಾವಳಿ ಭಾಗದಲ್ಲಿ 40 - 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಅರಬ್ಬಿ ಸಮುದ್ರದಲ್ಲಿ ನಾಲ್ಕೈದು 5 ಅಡಿ ಎತ್ತರಕ್ಕೆ ಅಲೆಗಳು ಏಳುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರಿಗೆ ಸಮುದ್ರ ಕ್ಕಿಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ. 

Follow Us:
Download App:
  • android
  • ios