ಐಪಿಎಸ್‌ ಅಧಿಕಾರಿ ಆರ್‌.ಕೆ. ದತ್ತಾ ವಿರುದ್ಧ ಸಾಮಾಜಿಕ ಕಾರ್ಯಕರ್ತ ಮಲ್ಲೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ತನ್ಮೂಲಕ ರಾಜ್ಯ ಪೊಲೀಸ್‌ ಮುಖ್ಯಸ್ಥರ ಹುದ್ದೆಯ (ಡಿಜಿಪಿ) ರೇಸ್‌ನಲ್ಲಿದ್ದ ಅವರಿಗೆ ಎದುರಾಗಿದ್ದ ಕಾನೂನು ತೊಡಕು ನಿವಾರಣೆಯಾಗಿದ್ದು, ಅವರು ರಾಜ್ಯದ ಮುಂದಿನ ಡಿಜಿಪಿಯಾಗುವ ಸಾಧ್ಯತೆ ಹೆಚ್ಚಿದೆ.
ನವದೆಹಲಿ/ಬೆಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ವ್ಯಾಸಂಗ ಮಾಡಿದ ಕುರಿತಂತೆ ತನಿಖೆ ಹಿರಿಯ ಐಪಿಎಸ್ ಅಧಿಕಾರಿ ಆರ್.ಕೆ.ದತ್ತಾ ವಿರುದ್ಧ ತನಿಖೆ ಕೋರಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಇದರ ಬೆನ್ನಲ್ಲೇ ಅವರು ಕರ್ನಾಟಕದ ಮುಂದಿನ ಡಿಜಿಪಿ ಆಗಿ ನೇಮಕವಾಗುವ ಸಾಧ್ಯತೆ ದಟ್ಟವಾಗಿದೆ.
ಐಪಿಎಸ್ ಅಧಿಕಾರಿ ಆರ್.ಕೆ. ದತ್ತಾ ವಿರುದ್ಧ ಸಾಮಾಜಿಕ ಕಾರ್ಯಕರ್ತ ಮಲ್ಲೇಶ್ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ತನ್ಮೂಲಕ ರಾಜ್ಯ ಪೊಲೀಸ್ ಮುಖ್ಯಸ್ಥರ ಹುದ್ದೆಯ (ಡಿಜಿಪಿ) ರೇಸ್ನಲ್ಲಿದ್ದ ಅವರಿಗೆ ಎದುರಾಗಿದ್ದ ಕಾನೂನು ತೊಡಕು ನಿವಾರಣೆಯಾಗಿದ್ದು, ಅವರು ರಾಜ್ಯದ ಮುಂದಿನ ಡಿಜಿಪಿಯಾಗುವ ಸಾಧ್ಯತೆ ಹೆಚ್ಚಿದೆ.
ಲೋಕಾಯುಕ್ತ ಪೊಲೀಸ್ ಮುಖ್ಯಸ್ಥರಾಗಿದ್ದಾಗ ದತ್ತಾ ಅವರು ಅನುಮತಿ ಪಡೆಯದೆ ಕರ್ತವ್ಯದಲ್ಲಿದ್ದಾಗಲೇ ವಿದೇಶದಿಂದ ಕಾನೂನು ಪದವಿ ಪಡೆದಿದ್ದಾರೆ. ಇದು ಕಾನೂನುಬಾಹಿರ ಎಂದು ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.
