Asianet Suvarna News Asianet Suvarna News

ಉಗ್ರರ ಹಾವಳಿ, ಇಡೀ ಕರ್ನಾಟಕಕ್ಕೆ ಮುನ್ನೆಚ್ಚರಿಕೆ: ಜೋಪಾನ

ದೇಶದಲ್ಲಿ ಭಯೋತ್ಪಾದಕ ದಾಳಿ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ, ರಾಜ್ಯದ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. 

Karnataka on high alert over terror threat
Author
Bengaluru, First Published Aug 17, 2019, 9:56 PM IST
  • Facebook
  • Twitter
  • Whatsapp

ಬೆಂಗಳೂರು, [ಆ.17]: ಕೆಲ ಶಂಕಿತರು ದೇಶದೊಳಗೆ ನುಸುಳಿ ವಿಧ್ವಂಸಕ ಕೃತ್ಯ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ.

ಪ್ರಮುಖವಾಗಿ ಬೆಂಗಳೂರಿನಲ್ಲಿ ಹೆಚ್ಚು ನಿಗಾ ವಹಿಸುವಂತೆ ಕಮಿಷನರ್ ಅವರಿಗೆ ಸೂಚಿಸಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳು ಹಾಗು ವಸ್ತುಗಳನ್ನು ತಪಾಸಣೆ  ನಡೆಸುವಂತೆಯೂ ಹೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಟೆರರ್ ಅಲರ್ಟ್: ರಾಯಚೂರಿನ ಹಟ್ಟಿ ಚಿನ್ನದ ಗಣಿ, RTPSಗೆ ಬಿಗಿ ಭದ್ರತೆ

 ಭಯೋತ್ಪಾದಕ ದಾಳಿಯ ಬಗ್ಗೆ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ಪಟ್ಟಣಗಳು ​​ಮತ್ತು ನಗರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಪ್ರಮುಖ ಸ್ಥಳಗಳ ಪ್ರತಿ ಮೂಲೆ -ಮೂಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಹೆಚ್ಚು ನಿಯೋಜಿಸಲಾಗಿದ್ದು, ಮೆಟಲ್ ಡಿಟೆಕ್ಟರ್ ಮತ್ತು ಶ್ವಾನ ದಳ ಮೂಲಕ ವ್ಯಾಪಕ ತಪಾಸಣೆ ನಡೆಸಲಾಗುತ್ತಿದೆ

ಭಯೋತ್ಪಾದಕ ದಾಳಿಯ ಬಗ್ಗೆ ಗುಪ್ತಚರ ಮಾಹಿತಿಗಳನ್ನು ಅನುಸರಿಸಿ ಎಲ್ಲಾ ಪೊಲೀಸ್ ಅಧಿಕಾರಿಗಳಿಗೂ ಜಾಗರೂಕರಾಗಿರಲು ಶುಕ್ರವಾರ ರಾತ್ರಿಯೇ ನಿರ್ದೇಶನ ನೀಡಲಾಗಿತ್ತು ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.

ಟೆರರ್ ಅಲರ್ಟ್: ಬೆಂಗಳೂರು ನಗರದಲ್ಲಿ ಕಟ್ಟೆಚ್ಚರ
     
ಗುಪ್ತಚರ ಇಲಾಖೆಗೆ ಖಚಿತ ಮಾಹಿತಿ
ದೇಶದಲ್ಲಿ ಅಪರಾಧ ಕೃತ್ಯಕ್ಕೆ ಸಂಚು ರೂಪಿಸಲು ಭಯೋತ್ಪಾದಕರ ಗುಂಪು ಯೋಜಿಸುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆಗೆ ಖಚಿತ ಮಾಹಿತಿ ಬಂದಿದೆ ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಯಲ್ಲಿ ಎಲ್ಲಾ ಪ್ರಮುಖವಾಗಿ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು, ದೇವಾಲಯಗಳು, ಮಾರುಕಟ್ಟೆಗಳು, ಮಾಲ್‌ಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ಭದ್ರತೆ ಬಲಪಡಿಸಲು ಸೂಚಿಸಿದೆ.
      
ಬೆಂಗಳೂರು ಅಲ್ಲದೇ ಹುಬ್ಬಳ್ಳಿ-ಧಾರವಾಡ, ಕಲಬುರಗಿ, ರಾಯಚೂರು, ಚಿತ್ರದುರ್ಗ, ಮಂಗಳೂರು, ದಾವಣಗೆರೆ, ಉಡುಪಿ, ಮೈಸೂರು ಮತ್ತು ತುಮಕೂರಿನಲ್ಲೂ ಭದ್ರತೆ ಬಿಗಿಗೊಳಿಸಲಾಗಿದೆ.

ಟೆರರ್ ಅಲರ್ಟ್: ಶಂಕಿತರನ್ನು ಮಂಗಳೂರು ಪೊಲೀಸರು ಖೆಡ್ಡಾಗೆ ಬೀಳಿಸಿದ್ದು ಹೀಗೆ...

ದೇವಸ್ಥಾನಗಳಲ್ಲೂ ಪೊಲೀಸ್ ಹದ್ದಿನಕಣ್ಣು
 ಶ್ರೀರಂಗಪಟ್ಟಣ ಮತ್ತು ಮೈಸೂರಿನ ಚಾಮುಂಡಿ ದೇಗುಲ, ಉಡುಪಿ ಕೃಷ್ಣ, ಕುಕ್ಕೆ ಸುಬ್ರಹ್ಮಣ್ಯ ಮತ್ತು ರಂಗನಾಥ ದೇವಾಲಯಗಳು ಸೇರಿದಂತೆ ಇತರೆ ಪ್ರಸಿದ್ಧ ದೇವಾಲಯಕ್ಕೆ ಆಗಮಿಸುವ ಭಕ್ತರನ್ನು  ಪೊಲೀಸರು ತಪಸಣೆ ನಡೆಸಿ ಬಳಿಕ ಒಳಗೆ ಬಿಡುತ್ತಿದ್ದಾರೆ. 
      
ಮಂಗಳೂರಿನಲ್ಲಿ 8 ಜನರ ಬಂಧನ
ಮಂಗಳೂರಿನಲ್ಲಿ ನ್ಯಾಶನಲ್ ಕ್ರೈಂ ಇನ್ವೆಸ್ಟಿಗೇಶನ್ ಬ್ಯೂರೋ ಹೆಸರಿನ ಬೋರ್ಡ್ ಹಾಕಿಕೊಂಡು ಕಾರಿನಲ್ಲಿ ಸುತ್ತಾಡುತ್ತಿದ್ದ 8 ಜನರ ಶಂಕಿತ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ. ಬಂಧಿತರು ಕೆಲದಿನಗಳಿಂದ ಮಂಗಳೂರಿನ ಹೋಟೆಲ್ ನಲ್ಲಿ ತಂಗಿದ್ದರು ಎಂದು ತಿಳಿದುಬಂದಿದ್ದು, ಇವರಿಂದ 2 ಪಿಸ್ತೂಲ್ ಹಾಗು 8 ಕಾಟ್ರೆಜ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Follow Us:
Download App:
  • android
  • ios