ಪೊಲೀಸರಿಗೆ ದಸರಾ ವೇಳೆಗೆ ಔರಾದ್ಕರ್ ಸಮಿತಿ ವರದಿ ಅನುಷ್ಠಾನಗೊಳಿಸಿರುವ ಒಳ್ಳೆಯ ಸುದ್ದಿ ಸಿಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು [ಸೆ.10]: ರಾಜ್ಯ ಪೊಲೀಸರಿಗೆ ನಾಡಹಬ್ಬ ದಸರಾ ವೇಳೆಗೆ ಔರಾದ್ಕರ್ ಸಮಿತಿ ವರದಿ ಅನುಷ್ಠಾನಗೊಳಿಸಿರುವ ಒಳ್ಳೆಯ ಸುದ್ದಿ ಸಿಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಹಬ್ಬದ ವೇಳೆಗೆ ಔರಾದ್ಕರ್ ಸಮಿತಿ ವರದಿ ಅನುಷ್ಠಾನ ಮಾಡಲು ಸರ್ಕಾರ ಬದ್ಧವಾಗಿದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಒಟ್ಟಿನಲ್ಲಿ ನಾಡ ಹಬ್ಬದ ವೇಳೆಗೆ ಪೊಲೀಸರಿಗೆ ಒಳ್ಳೆಯ ಸುದ್ದಿ ಸಿಗಲಿದೆ ಎಂದು ಹೇಳಿದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಔರಾದ್ಕರ್ ಸಮಿತಿ ವರದಿ ಅನುಷ್ಠಾನದಿಂದಾಗಿ ಪೇದೆಯಿಂದ ಹಿಡಿದು ಡಿವೈಎಸ್‌ಪಿವರೆಗೆ ಔರಾದ್ಕರ್ ವರದಿಯಂತೆ ವೇತನ ಪರಿಷ್ಕರಣೆ ಆಗಲಿದೆ. ಜತೆಗೆ ಕಾರಾಗೃಹ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಯ ವೇತನ ಪರಿಷ್ಕರಿಸುವ ಸಂಬಂಧ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಲಾಗಿದೆ. ಅವರಿಗೂ ಔರಾದ್ಕರ್ ವರದಿಯಂತೆ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.
