ವಿಧಾನಸೌಧ[ಜು.20]: ಬಿಜೆಪಿ ಶಾಸಕರ ವಿರುದ್ಧ 30 ಕೋಟಿ ರು. ಆಮಿಷವೊಡ್ಡಿದ ಆರೋಪ ಮಾಡಿರುವ ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಅವರ ಮಾನಸಿಕ ಸ್ಥಿತಿಯನ್ನು ಪರೀಕ್ಷೆಗೆ ಒಳಪಡಿಸಬೇಕಿದೆ ಎಂದು ಬಿಜೆಪಿ ಶಾಸಕ ಹಾಗೂ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಶುಕ್ರವಾರ ವಿಧಾನಸೌಧದಲ್ಲಿ ಭೋಜನ ವಿರಾಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕರಾದ ಡಾ.ಅಶ್ವತ್ಥನಾರಾಯಣ, ಎಸ್.ಆರ್. ವಿಶ್ವನಾಥ್, ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಅವರು ಕಳೆದ ಫೆಬ್ರವರಿಯಲ್ಲಿ 30 ಕೋಟಿ ರು.ಗಳ ಆಮಿಷವೊಡ್ಡಿ ತಮ್ಮ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ಐದು ಕೋಟಿ ರು.ಗಳನ್ನು ಮುಂಗಡವಾಗಿ ಕೊಟ್ಟಿದ್ದರು ಎಂದು ಕೋಲಾರ ಶಾಸಕ ಶ್ರೀನಿವಾಸಗೌಡ ಆರೋಪ ಮಾಡಿದ್ದರು. ಇದು ಶುದ್ಧ ಸುಳ್ಳು. ಬಿಜೆಪಿಯ ಯಾವುದೇ ಶಾಸಕರು ಆಮಿಷವೊಡ್ಡಿಲ್ಲ ಎಂದು ಸ್ಪಷ್ಟಪಡಿಸಿದರು.