ಬೆಂಗಳೂರು [ಜು.17] : ರಾಜ್ಯ ರಾಜಕೀಯದ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟವಾಗಿದೆ. ಮುಂದಿನ ನಿರ್ಧಾರವನ್ನು ಸ್ಪೀಕರ್ ಹಾಗೂ ಕಾನೂನು ತಜ್ಞರು ತೆಗೆದುಕೊಳ್ಳುತ್ತಾರೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. 

ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ಬಿಡುವುದಿಲ್ಲ. ಸದನದಲ್ಲಿ ಪಾಲ್ಗೊಳ್ಳುತ್ತೇನೆ. ಆದರೆ ರಾಜೀನಾಮೆ ವಿಚಾರವಾಗಿ ಯಾವುದೇ ಪ್ರತಿಕ್ರಿಯೇ ನೀಡಸಲು ಸಾಧ್ಯವಿಲ್ಲ ಎಂದರು. 

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅವಿಶ್ವಾಸ ಮತ ಯಾಚನೆ ವೇಳೆ ಯಾವ ನಿರ್ಧಾರ ಕೈಗೊಳ್ಳುತ್ತೇನೆ ಎನ್ನುವುದನ್ನು ಕಾದು ನೋಡಿ. ಮೈತ್ರಿ ಸರ್ಕಾರದ ಅಳಿವು ಉಳಿವಿನ ಬಗ್ಗೆ ಈಗಲೇ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದರು. 
  
ಇನ್ನು ಕಾಂಗ್ರೆಸಿನಲ್ಲೇ  ಉಳಿಯುವ ಬಗ್ಗೆಯೂ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರ ನಡೆ ಕುತೂಹಲ ಕೆರಳಿಸಿದ್ದು, ರಾಜೀನಾಮೆ ವಾಪಸ್ ಪಡೆಯುತ್ತಾರಾ ಎನ್ನುವ ಕುತೂಹಲ ಮೂಡಿದೆ.