ಮೈಸೂರು[ಜು.20]: ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮೊದಲು ಬಹುಮತ ಸಾಬೀತುಪಡಿಸುವುದಾಗಿ ಹೇಳಿದ್ದರು. ಈಗ ಬಹುಮತ ಸಾಬೀತುಪಡಿಸದೆ ಕಾಲಹರಣ ಮಾಡುತ್ತಿದ್ದಾರೆ. ಮತ್ತೊಂದೆಡೆ ಸ್ಪೀಕರ್ ರಮೇಶ್ ಕುಮಾರ್ ಸರ್ಕಾರದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಬಂದ ಸಂದರ್ಭದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿಗೂ ಸರ್ಕಾರ ಯಾವುದೇ ಬೆಲೆ ನೀಡುತ್ತಿಲ್ಲ. ರಾಜ್ಯಪಾಲರ ನಿರ್ದೇಶನವನ್ನೂ ಪಾಲಿಸುತ್ತಿಲ್ಲ. ವಿನಾಕಾರಣ ನಿಧಾನ ಮಾಡುವ ಮೂಲಕ ಸ್ಪೀಕರ್ ಕಾಂಗ್ರೆಸ್ ಹಾಗೂ ಸರ್ಕಾರದ ತಾಳಕ್ಕೆ ತಕ್ಕಂತೆ ವರ್ತಿಸುತ್ತಿದ್ದಾರೆ ಎಂದರು.