'ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು ಎಂಬ ಮಾತು ಸುಳ್ಳು| ಈ ಮಾತನ್ನು ಅವರು ನನ್ನ ಮುಂದೆ ಬಂದು ಹೇಳಲಿ ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ| ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ| ಸುಳ್ಳು ಆರೋಪಗಳ ವಿಷಕುಡಿದು,ಕುಡಿದು ನಾನು ವಿಷಕಂಠನ್ನಾಗಿದ್ದೇನೆ

ಬೆಂಗಳೂರು[ಜು.25]: ಬೆಂಗಳೂರಿನಿಂದ ಮುಂಬೈಗೆ ಹಾರಿದ್ದ ಅತೃಪ್ತ ಶಾಸಕರಿಂದ ಮೈತ್ರಿ ಸರ್ಕಾರ ಪತನಗೊಂಡಿದೆ. ಎಚ್. ಡಿ ಕುಮಾರ್ಸವಾಮಿ ರಾಜೀನಾಮೆ ನೀಡಿದ ಬಳಿಕ ಒಬ್ಬರಾದ ಬಳಿಕ ಮತ್ತೊಬ್ಬರಂತೆ ಮುಂಬೈನಲ್ಲಿ ಬೀಡು ಬಿಟ್ಟಿದ್ದ ಶಾಸಕರು ತ್ಮಮ ಊರಿನೆಡೆ ಮುಖ ಮಾಡುವುದು ಸ್ಪಷ್ಟವಾಗುತ್ತಿದೆ. ಹೀಗಿರುವಾಗ ಅತೃಪ್ತ ಶಾಸಕರ ಈ ಹಠಕ್ಕೆ ಕಾರಣವೇನು? ಬಿಜೆಪಿ ಅವರನ್ನು ಸೆಳೆಯಿತಾ? ಅಥವಾ ದೋಸ್ತಿ ನಾಯಕರೇ ಈ ಹುನ್ನಾರ ಮಾಡಿದರೇ ಎಂಬ ಪ್ರಶ್ನೆ ಮಾತ್ರ ಇನ್ನೂ ನಿಗೂಢ. 

Scroll to load tweet…

ಸದ್ಯ ಅತೃಪ್ತ ಶಾಸಕರು ರಾಜೀನಾಮೆ ನೀಡಲು ಸಿದ್ದರಾಮಯ್ಯನವರೇ ಕಾರಣ ಎಂಬ ಊಹಾಪೋಹಗಳು ಹರಿದಾಡಲಾರಂಭಿಸಿವೆ. ಆದರೀಗ ಈ ಊಹಾಪೋಹಗಳಿಗೆ ಸಂಬಂಧಿಸಿದಂತೆ ಮಾಜಿ ಸಿಎಂ ಗರಂ ಆಗಿದ್ದಾರೆ. ಅಲ್ಲದೇ ಇದು 'ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ' ಎಂದು ಗುಡುಗಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ''ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು' ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ. ಈ ಮಾತನ್ನು ಅವರು ನನ್ನ ಮುಂದೆ ಬಂದು ಹೇಳಲಿ ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ' ಎಂದಿದ್ದಾರೆ. 

Scroll to load tweet…

ಇದರ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿರುವ ಮಾಜಿ ಸಿಎಂ ಅತೃಪ್ತ ಶಾಸಕರ ವಿರುದ್ಧ ಕಿಡಿ ಕಾರಿದ್ದಾರೆ. 'ಸಿದ್ದರಾಮಯ್ಯನವರು ನಮ್ಮ‌‌ನಾಯಕರು' ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು. ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ. ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ' ಎಂದು ಎಚ್ಚರಿಸಿದ್ದಾರೆ. 

Scroll to load tweet…

ಇಷ್ಟೇ ಅಲ್ಲದೇ ರಾಜಕೀಯದಲ್ಲಿ ಇಂತಹ ಸುಳ್ಳು ಆರೋಪಗಳು ಸಾಮಾನ್ಯ ಎಂದಿರುವ ಸಿದ್ದರಾಮಯ್ಯ 'ಕೊನೆಗೆ ಸತ್ಯವೇ ಗೆಲ್ಲುವುದು. ಸತ್ಯಮೇವ ಜಯತೇ!' ಎನ್ನುವ ಮೂಲಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ