ಕಾಂಗ್ರೆಸ್ ಪಾಳಯದಲ್ಲಿ ಇದೀಗ ಹೊಸ ಆತಂಕ ಒಂದು ಮೂಡಿದೆ. ಮತ್ತೆ ನಾಲ್ವರು ಅತೃಪ್ತರ ಸಂಪರ್ಕದಲ್ಲಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಬೆಂಗಳೂರು [ಜು.15] : ರಾಜ್ಯ ರಾಜಕೀಯದಲ್ಲಿ ಪ್ರಹಸನ ಮುಂದುವರಿದಿದೆ. ಇದೀಗ ಕಾಂಗ್ರೆಸ್ ಪಾಳೆಯದಲ್ಲಿ ಹೊಸ ಆತಂಕದ ಛಾಯೆ ಮೂಡಿದೆ. ಬಿಸಿ ಬಿಸಿ ಚರ್ಚೆಯ ನಡುವೆ ಅನುಮಾನಗಳು ಮೂಡಲಾರಂಭಿಸಿವೆ.
ಇಂದೇ ಬಿಜೆಪಿ ವಿಶ್ವಾಸ ಮತಕ್ಕೆ ಪಟ್ಟು ಹಿಡಿದು ಸರ್ಕಾರ ಪತನ ಮಾಡಲಿದೆ ಎನ್ನುವ ಚರ್ಚೆ ಶರುವಾಗಿದೆ. ರಾಜ್ಯದಲ್ಲಿ ಸರ್ಕಾರ ಉಳಿಸಿ ಕೊಳ್ಳಲು ಹಲವು ರೀತಿಯ ಸರ್ಕಸ್ ನಡೆಸುತ್ತಿದ್ದು, ಉಳಿಯುತ್ತಾ, ಪತನವಾಗುತ್ತಾ ಎನ್ನುವ ಚರ್ಚೆ ಆರಂಭವಾಗಿದೆ.
ಇನ್ನು ಇದೇ ವೇಳೆ ಕಾಂಗ್ರೆಸ್ ನ ಮತ್ತೆ ನಾಲ್ವರು ಅತೃಪ್ತರು ಜೊತೆ ಸಂಪರ್ಕದಲ್ಲಿ ಇದ್ದಾರೆ ಎನ್ನುವ ಸುದ್ದಿ ಹಬ್ಬಿದ್ದು, ಇದರಿಂದ ಆತಂಕ ಇನ್ನೂ ಹೆಚ್ಚಾಗಿದೆ.
ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಒಂದು ವೇಳೆ ವಿಶ್ವಾಸ ಮತದಲ್ಲಿ ಸೋತರೆ ಸಿದ್ದರಾಮಯ್ಯ ಹೇಳಿದಂತೆ ವಿರೋಧ ಪಕ್ಷದಲ್ಲಿ ಕುಳಿತರೆ ಮುಂದಿನ ಚುನಾವಣೆಯಲ್ಲಾದರೂ ಅಧಿಕಾರಕ್ಕೆ ಬರಬಹುದಾ ಎನ್ನುವುದು ಪ್ರಶ್ನೆಯಾಗಿದೆ. ಇಂದು ಸದನ ಮಕ್ತಾಯದ ವೇಳೆ ಸರ್ಕಾರದ ಭವಿಷ್ಯ ನಿರ್ಧಾರವಾಗುವ ಸಾಧ್ಯತೆ ಇದೆ.
