ನಾಳೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಿಯು ಬೋರ್ಡ್ ಪ್ರಕಟ ಮಾಡುತ್ತಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ವಿದ್ಯಾರ್ಥಿಗಳು ವೆಬ್ ಸೈಟ್ ಮೂಲಕ ಫಲಿತಾಂಶವನ್ನು ನೋಡಬಹುದಾಗಿದೆ. ಇನ್ನು ನಾಳೆ ವೆಬ್ ಸೈಟ್’ಗಳಲ್ಲಿ ಫಲಿತಾಂಶ ಹೊರಬೀಳಲಿದ್ದು, ಮೇ.೧ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶವನ್ನು ಪ್ರಕಟ ಮಾಡಲಾಗುತ್ತದೆ. 

ಬೆಂಗಳೂರು : ನಾಳೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಿಯು ಬೋರ್ಡ್ ಪ್ರಕಟ ಮಾಡುತ್ತಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ವಿದ್ಯಾರ್ಥಿಗಳು ವೆಬ್ ಸೈಟ್ ಮೂಲಕ ಫಲಿತಾಂಶವನ್ನು ನೋಡಬಹುದಾಗಿದೆ. 
ಇನ್ನು ನಾಳೆ ವೆಬ್ ಸೈಟ್’ಗಳಲ್ಲಿ ಫಲಿತಾಂಶ ಹೊರಬೀಳಲಿದ್ದು, ಮೇ.೧ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶವನ್ನು ಪ್ರಕಟ ಮಾಡಲಾಗುತ್ತದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪಿಯು ಬೋರ್ಡ್ ವೆಬ್ ಸೈಟ್ www.pue.kar.nic.in ಗೆ ಲಾಗಿನ್ ಆಗುವ ಮೂಲಕ ತಮ್ಮ ಫಲಿತಾಂಶವನ್ನು ಪಡೆದುಕೊಳ್ಳಬಹುದಾಗಿದೆ. 

ಪ್ರಸಕ್ತ ಸಾಲಿನಲ್ಲಿ 3 ಲಕ್ಷದ 52 ಸಾವಿರದ 290 ಬಾಲಕರು ಹಾಗೂ 3 ಲಕ್ಷದ 37 ಸಾವಿರದ 860 ಬಾಲಕಿಯರು ಸೇರಿದಂತೆ ಒಟ್ಟು 6 ಲಕ್ಷದ 90ಸಾವಿರದ 150 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು.

ಫಲಿತಾಂಶಕ್ಕಾಗಿ ಎದುರು ನೋಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಆಲ್ ದಿ ಬೆಸ್ಟ್ ಹೇಳೋಣ.