ಬೆಂಗಳೂರು :  ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಿದ್ದು, 2019ರ ಮಾರ್ಚ್ 21ರಿಂದ ಏಪ್ರಿಲ್‌ 4ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ.

ಒಂದೆರಡು ವಿಷಯಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಿಷಯಗಳ ಪರೀಕ್ಷೆಗಳು ಬೆಳಗ್ಗೆ 9.30ರಿಂದ ಆರಂಭವಾಗಲಿವೆ. ಪ್ರತೀ ವರ್ಷದಂತೆ ಪ್ರಶ್ನೆ ಪತ್ರಿಕೆ ಓದಿಕೊಳ್ಳಲು ಪ್ರತಿ ವಿಷಯಕ್ಕೂ 15 ನಿಮಿಷ ಕಾಲಾವಕಾಶ ನೀಡಲಾಗಿದೆ. ಕರ್ನಾಟಕ ಶಾಸ್ತ್ರೀಯ ಸಂಗೀತ/ ಹಿಂದೂಸ್ತಾನಿ ಸಂಗೀತದ ಸೈದ್ಧಾಂತಿಕ ಪರೀಕ್ಷೆಯನ್ನು ಮಧ್ಯಾಹ್ನ 2 ಗಂಟೆಯಿಂದ 3.45ರವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3.45ರಿಂದ ಸಂಜೆ 5.15ರವರೆಗೆ ನಡೆಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಕಿವುಡ, ಮೂಕ ಸೇರಿದಂತೆ ವಿಭಿನ್ನ ಸಾಮರ್ಥ್ಯವುಳ್ಳ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ನಿಗದಿಪಡಿಸಿರುವ ಸಮಯದ ಜೊತೆಗೆ ಒಂದು ಗಂಟೆ ಹೆಚ್ಚುವರಿ ಸಮಯ ನೀಡಲಾಗುವುದು ಎಂದು ತಿಳಿಸಲಾಗಿದೆ.

ವೇಳಾಪಟ್ಟಿ:

ಮಾ.21- ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್‌, ಸಂಸ್ಕೃತ)

ಮಾ.25-ಗಣಿತ

ಮಾ.27- ದ್ವಿತೀಯ ಭಾಷೆ (ಇಂಗ್ಲಿಷ್‌, ಕನ್ನಡ)

ಮಾ.29- ಸಮಾಜ ವಿಜ್ಞಾನ

ಏ.2- ವಿಜ್ಞಾನ

ಏ.4- ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲೀಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು)