ಬೆಂಗಳೂರು(ಮೇ.25): ಲೋಕಸಭಾ ಚುನಾವಣೆ ಫಲಿತಾಂಶದ  ಬೆನ್ನಲ್ಲೇ KSRTC ಸೇರಿದಂತೆ ಎಲ್ಲಾ ನಿಗಮಗಳ ಬಸ್‌ ಪ್ರಯಾಣ ದರ ಏರಿಕೆಯಾಗಲಿದೆ ಅನ್ನೋ ಮಾತುಗಳು ಕೇಳಿಬಂದಿತ್ತು. ಆದರೆ ಈ ಕುರಿತು ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ವದಂತಿಗೆ ಕಿವಿಗೊಡಬೇಡಿ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ.

 

 

ಡೀಸೆಲ್ ದರ ಏರಿಳಿತದಿಂದಾಗಿ ಸಾರಿಗೆ ಸಂಸ್ಥೆಗೆ ಈವರೆಗೆ 100 ಕೋಟಿ ರೂ.ನಷ್ಟವಾಗಿದೆ.  ಬಸ್ ಪ್ರಯಾಣ ದರ ಏರಿಸದಿದ್ದರೆ ಸಾರಿಗೆ ಸಂಸ್ಥೆಗಳು ನಷ್ಟಕ್ಕೆ ಸಿಲುಕಲಿವೆ. ಹೀಗಾಗಿ  ಪ್ರಯಾಣ ದರವನ್ನು ಶೇ. 20ರಷ್ಟು ಹೆಚ್ಚಿಸಲು ಸಿಎಂ ಕುಮಾರಸ್ವಾಮಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಅನ್ನೋ ಸುದ್ದಿ ಹಬ್ಬಿತ್ತು. ಇದೀಗ ಸಚಿವರೇ ಸ್ಪಷ್ಟನೆ ನೀಡಿದ್ದು, ಪ್ರಯಾಣ ದರ 20%  ಏರಿಕೆಯಾಗುವ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿಲ್ಲ ಎಂದಿದ್ದಾರೆ.