ಕರ್ನಾಟಕ ಮಹಿಳಾ ಸಾಧಕಿ ಪ್ರಶಸ್ತಿಯ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಿಕ್ಷಣ ಇಲಾಖೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅವರ್ಡ್ ಟ್ರೋಫಿಯನ್ನು ಅನಾವರಣ ಮಾಡಿದರು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನೂರಕ್ಕೂ ಹೆಚ್ಚು ಮಹಿಳಾ ಸಾಧಕರು ಭಾಗಿಯಾಗಿದ್ದರು.

ಬೆಂಗಳೂರು[ಮೇ.05]: ಕರ್ನಾಟಕ ಮಹಿಳಾ ಸಾಧಕಿ ಪ್ರಶಸ್ತಿಯ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಿಕ್ಷಣ ಇಲಾಖೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅವರ್ಡ್ ಟ್ರೋಫಿಯನ್ನು ಅನಾವರಣ ಮಾಡಿದರು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನೂರಕ್ಕೂ ಹೆಚ್ಚು ಮಹಿಳಾ ಸಾಧಕರು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್’ನ ಸಿನಿಮಾ ವಿಭಾಗದ ಮುಖ್ಯಸ್ಥೆ ಸುಗುಣ ಸೇರಿದಂತೆ ಹಲವು ಗಣ್ಯರು ತಮ್ಮ ಸಾಧನೆಯ ಅನುಭವ ಹಂಚಿಕೊಂಡರು. ಗೈಡ್ ಆಫ್ ಹ್ಯೂಮೆನ್ ಅಚಿವರ್ ಸಂಸ್ಥೆ ನೀಡುವ ಈ ಪ್ರಶಸ್ತಿಯು ಒಟ್ಟು 18 ಕ್ಷೇತ್ರಗಳಲ್ಲಿ ನೀಡಲಾಗುತ್ತಿದೆ. ಈಗಾಗಲೇ ನೂರಕ್ಕೂ ಹೆಚ್ಚು ಸಾಧಕರು ನಾಮನಿರ್ದೇಶಿಸಿದ್ದು, ಜೂನ್ ಕೊನೆ ವಾರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಟಿ ಸ್ಪೂರ್ತಿ ವಿಶ್ವಾಸ್ ಹಾಗೂ ತಂಡ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಈ ವಿಶೇಷ ಪ್ರಶಸ್ತಿಯ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದಾರೆ.