ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿರುವ ಸ್ನೇಹಿತನ ಎಸ್ಟೇಟ್‌ಗೆ ಬಂದಿದ್ದ ಕಾರ್ತಿ ಅವರಿಗೆ ಶನಿವಾರ ಮಧ್ಯಾಹ್ನ ಎದೆನೋವು ಕಾಣಿಸಿಕೊಂಡು ಅನಾರೋಗ್ಯಕ್ಕೀಡಾಗಿದ್ದರು.

ಮಡಿಕೇರಿ(ಸೆ.16): ಕೇಂದ್ರ ಮಾಜಿ ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ಶನಿವಾರ ಕೊಡಗು ಜಿಲ್ಲೆ ವಿರಾಜಪೇಟೆ ನಡೆದಿದೆ. ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿರುವ ಸ್ನೇಹಿತನ ಎಸ್ಟೇಟ್‌ಗೆ ಬಂದಿದ್ದ ಕಾರ್ತಿ ಅವರಿಗೆ ಶನಿವಾರ ಮಧ್ಯಾಹ್ನ ಎದೆನೋವು ಕಾಣಿಸಿಕೊಂಡು ಅನಾರೋಗ್ಯಕ್ಕೀಡಾಗಿದ್ದರು. ಕೂಡಲೇ ಅವರನ್ನು ವಿರಾಜಪೇಟೆಯ ಖಾಸಗಿ ನರ್ಸಿಂಗ್ ಹೋಂವೊಂದಕ್ಕೆ ದಾಖಲಿಸಲಾಯಿತು. ಅಲ್ಲಿ ಎರಡು ಗಂಟೆಗಳ ಕಾಲ ಡಾ.ಕಾರ್ಯಪ್ಪ ಅವರಿಂದ ಚಿಕಿತ್ಸೆ ಪಡೆದುಕೊಂಡ ಅವರು ಬಳಿಕ ಚೆನ್ನೈಗೆ ವಾಪಸಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred