ತಮಿಳುನಾಡು ಮಾಜಿ ಸಿಎಂ ಸಾವಿನ ನಂತರ ಚೆನ್ನೈನಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಅಂತ್ಯ ಸಂಸ್ಕಾರಕ್ಕೆ ಜಾಗ ನಿಗದಿ ಮಾಡುವ ವಿಚಾರ ವಿವಾದಕ್ಕೆ ಕಾರಣವಾಗಿದ್ದು ಅಭಿಮಾನಿಗಳು ಕಾವೇರಿ ಆಸ್ಪತ್ರೆ ಬಳಿ ಬ್ಯಾರಿಕೇಡ್ ಮುರಿದು ಆಕ್ರೋಶ ಹೊರ ಹಾಕಿದ್ದಾರೆ.

ಚೆನ್ನೈ[ಆ.7] ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಅಂತ್ಯ ಸಂಸ್ಕಾರಕ್ಕೆ ಜಾಗ ನಿಗದಿ ಮಾಡುವ ವಿಚಾರ ವಿವಾದಕ್ಕೆ ಕಾರಣವಾಗಿದೆ. ಕರುಣಾನಿಧಿ ಅಭಿಮಾನಿಗಳು ಮರೀನಾ ಬೀಚ್ ನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸುತ್ತಿರುವುದು ಹಿಂಸಾಚಾರಕ್ಕೆ ತಿರುಗಿದೆ.

Add Asianetnews Kannada as a Preferred SourcegooglePreferred

ಆದರೆ ಮರೀನಾ ಬೀಚ್ ನಲ್ಲಿ ಅವಕಾಶ ನೀಡುವ ಬಗ್ಗೆ ತಮಿಳುನಾಡು ಸರಕಾರ ಇಲ್ಲಿಯವರೆಗೆ ಯಾವುದೆ ಸ್ಪಷ್ಟನೆ ನೀಡಿಲ್ಲ ಎಂಬ ವಿಚಾರ ಅಭಿಮಾನಿಗಳ ತಾಳ್ಮೆಯ ಕಟ್ಟೆ ಒಡೆದಿದೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ ಮಾಡಿದ್ದಾರೆ.

ತಮಿಳರ ದ್ರಾವಿಡ ಕಣ್ಮಣಿ ಇನ್ನಿಲ್ಲ