ಕರುಣಾನಿಧಿ ಆರೋಗ್ಯದಲ್ಲಿ ಏರುಪೇರುಮತ್ತಷ್ಟು ಹದಗೆಟ್ಟ ಕರುಣಾನಿಧಿ ಆರೋಗ್ಯಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆಕೆಲವೇ ಕ್ಷಣಗಳಲ್ಲಿ ವೈದ್ಯರಿಂದ ಸುದ್ದಿಗೋಷ್ಠಿಚೆನ್ನೈ ನಗರಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ
ಚೆನ್ನೈ(ಜು.29): ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಎಂ. ಕರುಣಾನಿಧಿ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಕರುಣಾನಿಧಿ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಕರುಣಾನಿಧಿ ಕುಟುಂಬ ಆಸ್ಪತ್ರೆಗೆ ಧಾವಿಸಿದ್ದು, ತಮಿಳುನಾಡು ಸಿಎಂ ಪಳನಿಸ್ವಾಮಿ ಸೇಲಂ ಕಾರ್ಯಕ್ರಮ ರದ್ದುಗೊಳಿಸಿ ಚೆನ್ನೈನತ್ತ ಧಾವಿಸುತ್ತಿದ್ದಾರೆಎಂದು ಮೂಲಗಳು ತಿಳಿಸಿವೆ.

ಇನ್ನು ಕೆಲವೇ ಕ್ಷಣಗಳಲ್ಲಿ ಕಾವೇರಿ ಆಸ್ಪತ್ರೆ ವೈದ್ಯರು ಸುದ್ದಿಗೋಷ್ಠಿ ನಡೆಸಲಿದ್ದು, ಕಾವೇರಿ ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇದೇ ವೇಳೇ ಇಡೀ ಚೆನ್ನೈ ನಗರಕ್ಕೂ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.
