ಕರುಣಾನಿಧಿ ಅಂತಿಮ ದರ್ಶನಕ್ಕೆ ನೂಕು ನುಗ್ಗಲು ಉಂಟಾಗಿದ್ದು ಇಬ್ಬರು ಅಭಿಮಾನಿಗಳು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ. ಚೆನ್ನೈನ ರಾಜಾಜಿ ಹಾಲ್ ನಲ್ಲಿ ಕರುಣಾನಿಧಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.
ಚೆನ್ನೈ(ಆ.8): ಎಂ.ಕರುಣಾನಿಧಿ ಅವರ ಪ್ರಾರ್ಥೀವ ಶರೀರದ ಅಂತಿಮ ದರ್ಶನದ ವೇಳೆ ರಾಜಾಜಿ ಹಾಲ್ ಬಳಿ ನೂಕು ನುಗ್ಗಲು ಉಂಟಾಗಿದ್ದು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ.
ಕಾಳ್ತುಳಿತಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ .ಎಂಜಿಆರ್ ನಗರದ ಶೇನ್ ಭಾಗಮ್ (60) ಸಾವೀಗೀಡಾಗಿದ್ದು ಇನ್ನೊಬ್ಬರ ಗುರುತು ಪತ್ತೆ ಆಗಿಲ್ಲ. ಏಳು ಜನ ಗಂಭೀರವಾಗಿ ಗಾಯಗೊಂಡಿದ್ದು ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 41 ಜನರನ್ನು ದಾಖಲಿಸಲಾಗಿದೆ.
