ಚಾಮರಾಜಪೇಟೆಯ ಹಿಂದೂ ರುದ್ರ ಭೂಮಿಯಲ್ಲಿ ಕಾಶೀನಾಥ್ ಅವರ ಅಂತ್ಯಕ್ರಿಯೆ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಕಾಶಿನಾಥ್ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಕಾಶಿನಾಥ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.

Add Asianetnews Kannada as a Preferred SourcegooglePreferred

ಚಾಮರಾಜಪೇಟೆಯ ಹಿಂದೂ ರುದ್ರ ಭೂಮಿಯಲ್ಲಿ ಕಾಶೀನಾಥ್ ಅವರ ಅಂತ್ಯಕ್ರಿಯೆಯು ಇಂದು ಸಂಜೆ ನಡೆಯಿತು.

ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಕಾಶಿನಾಥ್ ಅಂತ್ಯಕ್ರಿಯೆ ನಡೆದಿದ್ದು, ಚಿತೆಗೆ ಅವರ ಪುತ್ರ ಅಭಿಮನ್ಯು ಅಗ್ನಿಸ್ಪರ್ಶ ಮಾಡಿದ್ದಾರೆ.

ಅಂತ್ಯಕ್ರಿಯೆಯಲ್ಲಿ ಕುಟುಂಬ ಸದಸ್ಯರು, ಸಂಬಂಧಿಕರು, ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಗಣ್ಯರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕನ್ನಡದ ಹಿರಿಯ ನಟ, ನಿರ್ದೇಶಕ ಕಾಶೀನಾಥ್ ಆನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಅನುಭವ, ಅಜಗಜಾಂತರ, ಅನಂತನ ಅವಾಂತರ, ಅಪರಿಚಿತ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿ, ನಿರ್ದೇಶಿಸಿದ್ದ ಕಾಶೀನಾಥ್, ಪತ್ನಿ ಹಾಗೂ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಇತ್ತೀಚಿಗೆ ನಂದ ಕಿಶೋರ್ ನಿರ್ದೆಶನದ ಚೌಕಾ ಚಿತ್ರದಲ್ಲೂ ನಟಿಸಿದ್ದರು. ಅನಾರೋಗ್ಯದ ಕಾರಣ ಕಳೆದ 2 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ನಟ ಉಪೇಂದ್ರ, ಸಂಗೀತ ನಿರ್ದೇಶಕ ವಿ. ಮನೋಹರ್, ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಸೇರಿದಂತೆ ಹಲವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು.