ಜಮ್ಮು[ಆ.06]: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸವಲತ್ತು ಕಲ್ಪಿಸುವ ಸಾಂವಿಧಾನಿಕ 370ನೇ ವಿಧಿ ರದ್ದುಗೊಳಿಸುವ ಆದೇಶವನ್ನು ಕೇಂದ್ರ ಸರ್ಕಾರ ಹೊರಡಿಸಿದ ಬೆನ್ನಲ್ಲೇ, ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಹಾಗೂ ಒಮರ್‌ ಅಬ್ದುಲ್ಲಾ ಸೇರಿದಂತೆ ಇತರ ನಾಯಕರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆಪರೇಷನ್ ಕಾಶ್ಮೀರ, ಆರ್ಟಿಕಲ್ 370 ರದ್ದು: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸೋಮವಾರದವರೆಗೂ ಗೃಹಬಂಧನದಲ್ಲಿದ್ದ ಮುಫ್ತಿ, ಅಬ್ದುಲ್ಲಾ ಅಷ್ಟೇ ಅಲ್ಲದೆ, ಜಮ್ಮು-ಕಾಶ್ಮೀರದ ಪೀಪಲ್ಸ್‌ ಕಾನ್ಫರೆನ್ಸ್‌ ನಾಯಕರಾದ ಸಜ್ಜದ್‌ ಲೋನ್‌ ಹಾಗೂ ಇಮ್ರಾನ್‌ ಅನ್ಸಾರಿ ಸೇರಿದಂತೆ ಇತರರನ್ನು ಬಂಧಿಸಲಾಗಿದೆ. ಆದರೆ, ಇದಕ್ಕಿಂತ ಹೆಚ್ಚಿನ ಮಾಹಿತಿ ನೀಡಲು ಅಧಿಕಾರಿಗಳು ನಿರಾಕರಿಸಿದರು.