ಉಗ್ರ ಬುರ್ಹಾನ್ ವಾನಿಯ ಹತ್ಯೆಯನ್ನು ಖಂಡಿಸಿ ಕಳೆದ ನಾಲ್ಕು ತಿಂಗಳಿನಿಂದ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದರು. ಆದರೆ ಈಗ ಎರಡು ದಿನಗಳ ವರೆಗೆ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ.
ಶ್ರೀನಗರ (ನ.26): ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದು ಸಹಜ ಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ.
ಪ್ರತ್ಯೇಕತಾವಾದಿಗಳು ಪ್ರತಿಭಟನೆಯನ್ನು ವಾಪಸ್ ಪಡೆದಿರುವುದರಿಂದ ಸಾರ್ವಜನಿಕ ಸಂಚಾರ ವ್ಯವಸ್ಥೆ, ವ್ಯಾಪಾರ ವಹಿವಾಟುಗಳು ಪ್ರಾರಂಭವಾಗಿದ್ದು , ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.
ಉಗ್ರ ಬುರ್ಹಾನ್ ವಾನಿಯ ಹತ್ಯೆಯನ್ನು ಖಂಡಿಸಿ ಕಳೆದ ನಾಲ್ಕು ತಿಂಗಳಿನಿಂದ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದರು. ಆದರೆ ಈಗ ಎರಡು ದಿನಗಳ ವರೆಗೆ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ.
ಜನಜೀವನ ಸಹಜಸ್ಥಿತಿಗೆ ಮರಳಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಶ್ರೀನಗರದಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವುಗೊಳಿಸಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರ ಬುರ್ಹಾನ್ ವಾನಿಯ ಹತ್ಯೆಯನ್ನು ಖಂಡಿಸಿ ಪ್ರತ್ಯೇಕತಾವಾದಿಗಳು ನಾಲ್ಕು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದರು.