ಲಕ್ನೋ(ಮಾ.07): ಪುಲ್ವಾಮಾ ಭಯೋತ್ಪಾದಕ ದಾಳಿಯ ಬಳಿಕ ದೇಶದೆಲ್ಲೆಡೆ ಕಾಶ್ಮೀರಿ ಯುವಕರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಕೂಡ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಇಬ್ಬರು ಕಾಶ್ಮೀರಿ ವ್ಯಾಪಾರಿಗಳ ಮೇಲೆ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶ ರಾಜಧಾನಿ ಲಕ್ನೋದಲ್ಲಿ ನಡೆದಿದೆ.

ಬುಧವಾರ ಸಂಜೆ ನಡೆದ ಘಟನೆಯಲ್ಲಿ ಹಣ್ಣು ವ್ಯಾಪಾರ ಮಾಡುತ್ತಿದ್ದ ಕಾಶ್ಮೀರಿ ಯುವಕರಿಬ್ಬರ ಮೇಲೆ ಗುಂಪಂದು ಹಲ್ಲೆ ಮಾಡಿದೆ. ಗುಂಪಿನಲ್ಲಿದ್ದವರು ಕೇಸರಿ ಬಟ್ಟೆಗಳನ್ನು ಧರಿಸಿದ್ದು, ಕಾಶ್ಮೀರಿ ವ್ಯಾಪಾರಿಗಳಿಗೆ ಹಿಗ್ಗಾ ಮುಗ್ಗಾ ಥಳಿಸುತ್ತಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ.

ಆದರೆ ಸ್ಥಳೀಯರು ಕಾಶ್ಮೀರಿ ಯುವಕರನ್ನು ರಕ್ಷಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು, ಮತ್ತಿಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.