ಕೆಬಿಸಿಯಲ್ಲಿ ತೇಜಸ್ವಿ ಸೂರ್ಯ ಹೆಸರು/ ತಪ್ಪು ಉತ್ತರ ನೀಡಿದಕ್ಕೆ ಬೇಸರ ವ್ಯಕ್ತಪಡಿಸಿದ ಸೂರ್ಯ/ ನಾನು ಐಕಿಡೋ (ಮಾರ್ಷಲ್ ಆರ್ಟ್ಸ್)ದಲ್ಲಿ ಬ್ಲ್ಯಾಕ್ ಬೆಲ್ಟ್ ತೆಗೆದುಕೊಂಡಿದ್ದರೆ ನೀವು ಇಂದು ಶ್ರೀಮಂತರಾಗಿರುತ್ತಿದ್ರಿ

ಬೆಂಗಳೂರು[ನ 04] ಕೆಬಿಸಿ ಕೇವಲ ಒಂದು ಶೋ ಆಗಿ ಮಾತ್ರ ಉಳಿದುಕೊಂಡಿಲ್ಲ. ಅದೊಂದು ಜ್ಞಾನ ಹಂಚುವ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮುಖೇನ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಸುದ್ದಿ ಮಾಡಿದ್ದಾರೆ.

ಅರೆ ಸೂರ್ಯರಿಗೂ ಕೆಬಿಸಿಗೂ ಏನು ಸಂಬಂಧ ಎಂದೀರಾ? ಈ ಸುದ್ದಿ ಓದಲೇಬೇಕು. ಕನ್ನಡದ ಕೆಬಿಸಿಯಲ್ಲಿ ಪುನೀತ್ ರಾಜ್ ಕುಮಾರ್ ಕೇಳದ ಪ್ರಶ್ನೆಗಳಿಗೆ ಸಂಸದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಭಾಗವಹಿಸಿದ್ದರು.

ಸೋಶಿಯಲ್ ಮೀಡಿಯಾ ಮೂಲಕ ತೇಜಸ್ವಿ ಸೂರ್ಯ ಕೌನ್ ಬನೇಗಾ ಕರೋಡ್ ಪತಿಯ ಸ್ಕೀನ್ ಶಾಟ್ ವೊಂದನ್ನು ಹಂಚಿಕೊಂಡಿದ್ದಾರೆ. ಮತ್ತು ನೋವಿನಿಂದ ವಿವರಣೆಯೊಂದನ್ನು ನೀಡಿದ್ದಾರೆ. ತಮ್ಮ ಹೆಸರನ್ನು ಆಯ್ಕೆ ಮಾಡಿ ತಪ್ಪು ಉತ್ತರ ನೀಡಿದ ವ್ಯಕ್ತಿಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಕಂಡುಹಿಡಿದ ಸೂರ್ಯ

ಖಾಸಗಿ ವಾಹಿನಿಯ ಜನಪ್ರಿಯ ಶೋ ಆಗಿರುವ ‘ಕೌನ್ ಬನೇಗಾ ಕರೋಡ್‌ಪತಿ’ (ಕೆಬಿಸಿ) ಕಾರ್ಯಕ್ರಮದ ಸ್ಪರ್ಧಿಗೆ 17ನೇ ಲೋಕಸಭಾ ಸದನದ ಸದಸ್ಯರ ಕುರಿತ ಪ್ರಶ್ನೆಯನ್ನು ಕೇಳಲಾಗಿತ್ತು. ಆದರೆ ಈ ಪ್ರಶ್ನೆಗೆ ಸ್ಪರ್ಧಿ, ತೇಜಸ್ವಿ ಸೂರ್ಯ ಅವರ ಹೆಸರನ್ನು ಆಯ್ಕೆ ಮಾಡಿ ಸ್ಪರ್ಧಿ ತಪ್ಪು ಉತ್ತರ ನೀಡಿ ಸ್ಪರ್ಧೆಯಿಂದ ಔಟ್ ಆಗಿದ್ದರು.

ಉತ್ತರ ಪ್ರದೇಶ ಮಥುರಾದಿಂದ ಶೋಗೆ ಆಗಮಿಸಿದ್ದ ನರೇಂದ್ರ ಕುಮಾರ್ ಅವರು 11ನೇ ಆವೃತ್ತಿಯ ಕೆಬಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 10ನೇ ಪ್ರಶ್ನೆವರೆಗೂ ಸರಿ ಉತ್ತರಿಸಿದ್ದ ನರೇಂದ್ರ ಕುಮಾರ್3.2 ಲಕ್ಷ ರೂ.ಗಳನ್ನು ಗೆದ್ದಿದ್ದರು. ಆದರೆ 11ನೇ ಪ್ರಶ್ನೆಗೆ ತಪ್ಪು ಉತ್ತರ ನೀಡಿ 6.40 ಲಕ್ಷ ರೂ. ಗೆಲ್ಲುವ ಅವಕಾಶದಿಂದ ವಂಚಿತರಾಗಿ ಕಾರ್ಯಕ್ರಮದಿಂದ ನಿರ್ಗಮಿಸಿದ್ದರು.

17ನೇ ಲೋಕಸಭಾ ಸದನದ ಸದಸ್ಯರಾದ ಕೆಳಗಿನ 4 ನಾಲ್ಕು ಸದಸ್ಯರಲ್ಲಿ ಯಾರಿಗೆ ಐಕಿಡೋ (ಮಾರ್ಷಲ್ ಆರ್ಟ್ಸ್)ದಲ್ಲಿ ಬ್ಲ್ಯಾಕ್ ಬೆಲ್ಟ್ ಲಭಿಸಿದೆ ಎಂಬ ಪ್ರಶ್ನೆಯನ್ನು ಕೇಳಿ ಆಯ್ಕೆಗಳನ್ನು ನೀಡಲಾಗಿತ್ತು.

ಎ) ಗೌತಮ್ ಗಂಭೀರ್, ಬಿ) ರಾಹುಲ್ ಗಾಂಧಿ, ಸಿ) ಅನುರಾಗ್ ಠಾಕೂರ್, ಡಿ) ತೇಜಸ್ವಿ ಸೂರ್ಯ ಆಯ್ಕೆಗಳನ್ನು ನೀಡಲಾಗಿತ್ತು. ಈ ಪ್ರಶ್ನೆಗೆ ನರೇಂದ್ರ ಅವರು ತೇಜಸ್ವಿ ಸೂರ್ಯ ಅವರ ಹೆಸರನ್ನು ಆಯ್ಕೆ ಮಾಡಿದ್ದರು. ಆದರೆ ಸರಿ ಉತ್ತರ ರಾಹುಲ್ ಗಾಂಧಿಯಾಗಿತ್ತು.

Scroll to load tweet…