ತೆಲಂಗಾಣ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಪುನರಾಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಕೆ. ಚಂದ್ರಶೇಖರರಾವ್‌ ಅವರು ಗುರುವಾರ ಪ್ರಮಾಣ ಸ್ವೀಕರಿಸಲಿದ್ದಾರೆ

ಹೈದರಾಬಾದ್‌[ಡಿ.13]: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಪುನರಾಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಕೆ. ಚಂದ್ರಶೇಖರರಾವ್‌ ಅವರು ಗುರುವಾರ ಪ್ರಮಾಣ ಸ್ವೀಕರಿಸಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜಭವನದಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯುವ ಸಮಾರಂಭದಲ್ಲಿ ‘ಕೆಸಿಆರ್‌’ ಅವರು ಶಪಥಗ್ರಹಣ ಮಾಡಲಿದ್ದಾರೆ. ರಾಜ್ಯಪಾಲ ಇಎಸ್‌ಎಲ್‌ ನರಸಿಂಹನ್‌ ಅವರು ಪ್ರಮಾಣವಚನ ಹಾಗೂ ಗೋಪ್ಯತಾ ವಿಧಿಯನ್ನು ಬೋಧಿಸಲಿದ್ದಾರೆ.

ಬುಧವಾರ ನಡೆದ ಟಿಆರ್‌ಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಶಾಸಕರು ಕೆಸಿಆರ್‌ ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಡಿ.7ರಂದು ನಡೆದ ತೆಲಂಗಾಣ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ 88 ಸ್ಥಾನಗಳನ್ನು ಟಿಆರ್‌ಎಸ್‌ ಗೆದ್ದುಕೊಂಡಿತ್ತು. ಕೆಸಿಆರ್‌ ಅವರು ಸಿದ್ದಿಪೇಟ್‌ ಜಿಲ್ಲೆಯ ಗಜ್ವೇಲ್‌ ಕ್ಷೇತ್ರದಿಂದ 58290 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದರು.