Asianet Suvarna News Asianet Suvarna News

ಮೂರು ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆ : ರೆಡ್‌ ಅಲರ್ಟ್‌ ಘೋಷಣೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಪರಿಣಾಮ ಕೇರಳ ಮತ್ತು ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೇರಳದ ಮೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ರೆಡ್ ಅಲರ್ಟ್ ಘೋಷಿಸಲಾಗಿದೆ. 

Kerala Disaster Authority Issues Red Alert
Author
Bengaluru, First Published Oct 4, 2018, 12:15 PM IST

ತಿರುವನಂತಪುರ: ಶ್ರೀಲಂಕಾದ ಬಳಿ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಪರಿಣಾಮ ಕೇರಳ ಮತ್ತು ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಕ್ಟೋಬರ್‌ 7 ಭಾನುವಾರ ಕೇರಳದ ಇಡುಕ್ಕಿ ಪಾಲಕ್ಕಾಡ್, ತ್ರಿಶೂರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಹೊರಡಿಸಿದೆ.

ಅಲ್ಲದೆ, ಶುಕ್ರವಾರದ ಹೊತ್ತಿಗೆ ಸಮುದ್ರಕ್ಕೆ ಇಳಿದಿರುವ ಎಲ್ಲ ಮೀನುಗಾರರು ಹೊರ ಬರುವಂತೆ ಐಎಂಡಿ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಮುಂದಾಲೋಚನಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣೆ ದಳದ ಐದು ತಂಡಗಳನ್ನು ರವಾನಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಬುಧವಾರ ಮಾತನಾಡಿದ ವಿಜಯನ್‌ ಅವರು, ‘ಭಾರೀ ಮಳೆಯ ಕುರಿತು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಆಯಾ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಅಲ್ಲದೆ, ನೀಲಕುರಿಂಜಿ ಹಾಗೂ ಮುನ್ನಾರ್‌ನಂಥ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ತೆರಳದಂತೆ ನಿರ್ದೇಶಿಸಲಾಗಿದೆ,’ ಎಂದರು.

Follow Us:
Download App:
  • android
  • ios