ರಿಶ್ಶೂರ್ ನಿವಾಸಿಯಾಗಿದ್ದ ಉಣ್ಣಿಕೃಷ್ಣನ್, ನವೆಂಬರ್ 6 ರಂದು  ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸುಳ್ಯ ಬಸ್​ ನಿಲ್ದಾಣಕ್ಕೆ ಆಗಮಿಸಿದ್ದಾಗ ರಿಕ್ಷಾ ಚಾಲಕ ಅಬೂಬಕರ್ ಜತೆ ತಗಾದೆ ತೆಗೆದು ಹಲ್ಲೆ ನಡೆಸಿದ್ದರು.  ಜತೆಗೆ ಪೊಲೀಸ್ ಸಿಬ್ಬಂದಿ ಸಚಿನ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಗಫೂರ್ ಮೇಲೆ ಹಲ್ಲೆ ನಡೆಸಿದ್ದರು.

ಮಂಗಳೂರು (ನ.09): ದಕ್ಷಿಣ ಕನ್ನಡದ ಸುಳ್ಯದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪ ಹೊತ್ತಿದ್ದ ಕಾಸರಗೋಡಿನ ಜಿಲ್ಲಾ ನ್ಯಾಯಾಧೀಶ ಉಣ್ಣಿಕೃಷ್ಣನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಸರಗೋಡಿನ ವಿದ್ಯಾನಗರದಲ್ಲಿರುವ ಸರ್ಕಾರಿ ಕ್ವಾಟ್ರಸ್ ನಲ್ಲಿ ನೇಣು ಬಿಗಿದು ಉಣ್ಣಿಕೃಷ್ಣನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತ್ರಿಶ್ಶೂರ್ ನಿವಾಸಿಯಾಗಿದ್ದ ಉಣ್ಣಿಕೃಷ್ಣನ್, ನವೆಂಬರ್ 6 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸುಳ್ಯ ಬಸ್​ ನಿಲ್ದಾಣಕ್ಕೆ ಆಗಮಿಸಿದ್ದಾಗ ರಿಕ್ಷಾ ಚಾಲಕ ಅಬೂಬಕರ್ ಜತೆ ತಗಾದೆ ತೆಗೆದು ಹಲ್ಲೆ ನಡೆಸಿದ್ದರು. ಜತೆಗೆ ಪೊಲೀಸ್ ಸಿಬ್ಬಂದಿ ಸಚಿನ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಗಫೂರ್ ಮೇಲೆ ಹಲ್ಲೆ ನಡೆಸಿದ್ದರು.

ಆ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಘಟನೆಯಿಂದ ಅಘಾತಗೊಂಡಿದ್ದ ಉಣ್ಣಿಕೃಷ್ಣನ್, ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.