ಕೇರಳ ಲವ್ ಜಿಹಾದ್ ಪ್ರಕರಣದ ವಿಚಾರಣೆ ಮುಂದುವರೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ಪೀಠ ಹಾದಿಯಾ ಅಲಿಯಾಸ್ ಅಖಿಲಾ ಅಶೋಕನ್ ವಯಸ್ಕಳಾಗಿರುವುದರಿಂದ ಅವಳ ಒಪ್ಪಿಗೆಯನ್ನು ಪಡೆಯುವುದು ಮುಖ್ಯವೆಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ನವದೆಹಲಿ (ಅ.30): ಕೇರಳ ಲವ್ ಜಿಹಾದ್ ಪ್ರಕರಣದ ವಿಚಾರಣೆ ಮುಂದುವರೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ಪೀಠ ಹಾದಿಯಾ ಅಲಿಯಾಸ್ ಅಖಿಲಾ ಅಶೋಕನ್ ವಯಸ್ಕಳಾಗಿರುವುದರಿಂದ ಅವಳ ಒಪ್ಪಿಗೆಯನ್ನು ಪಡೆಯುವುದು ಮುಖ್ಯವೆಂದು ಭಿಪ್ರಾಯಪಟ್ಟಿದೆ.

ವಿಚಾರಣೆ ನಡೆಸಿದ ಮುಖ್ಯ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ಪೀಠ, ಮುಂದಿನ ವಿಚಾರಣೆ ನಡೆಯುವ ದಿನ ಅಂದರೆ ನ. 27 ರಂದು ಕೋರ್ಟ್’ಗೆ ಹಾಜರುಪಡಿಸಿ. ಅಂದು ಅವರ ಜೊತೆ ಮುಕ್ತ ವಿಚಾರಣೆ ನಡೆಸಲಾಗುವುದು. ಅವರ ಅಭಿಪ್ರಾಯವನ್ನು ತೆಗೆದುಕೊಳ್ಳಲಾಗುವುದು ಎಂದು ಕೋರ್ಟ್ ಹಾದಿಯಾ ತಂದೆಗೆ ಸೂಚಿಸಿದೆ.

ಏನಿದು ಪ್ರಕರಣ?
ಹೋಮಿಯೋಪಥಿ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಹಿಂದೂ ಹುಡುಗಿ ಹಾದಿಯಾ ಅವರು ಶೆಫಿನ್ ಜಹಾನ್'ರನ್ನು ಪ್ರೀತಿಸುತ್ತಾರೆ. ಇಸ್ಲಾಮ್'ಗೆ ಮತಾಂತರಗೊಂಡು ಶೆಫಿನ್'ರನ್ನ ವಿವಾಹವಾಗುತ್ತಾರೆ. ಆದರೆ, ಹಾದಿಯಾಳ ಪೋಷಕರು ಇದೊಂದು ಲವ್ ಜಿಹಾದ್ ಕೇಸ್ ಎಂದು ಆರೋಪಿಸಿದ್ದಾರೆ. ತನ್ನ ಮಗಳ ಬ್ರೈನ್ ವಾಶ್ ಮಾಡಲಾಗಿದೆ. ಇಸ್ಲಾಮ್'ಗೆ ಮತಾಂತರ ಮಾಡುವ ವ್ಯವಸ್ಥಿತ ಪಿತೂರಿಗೆ ತನ್ನ ಮಗಳು ಬಲಿಯಾಗಿದ್ದಾಳೆ ಎಂದು ಹಾದಿಯಾಳ ತಂದೆ ಆರೋಪಿಸಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಆಗ ಕೋರ್ಟ್ ಹಾದಿಯಾಳ ವಿವಾಹವನ್ನು ಅಮಾನ್ಯಗೊಳಿಸಿ ಆಕೆಯ ಪೋಷಕರ ಸುಪರ್ದಿಗೆ ಒಪ್ಪಿಸಿತ್ತು.