ಬೆಂಗಳೂರು[ಜು. 29]  ವಿಧಾನಸಭೆಯ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಅವರು ಸೋಮವಾರ ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಜುಲೈ 31ರಂದು ಚುನಾವಣೆ ನಿಗದಿಪಡಿಸಿ ರಾಜ್ಯಪಾಲ ವಜುವಾಯಿ ವಾಲಾ ಅವರು ಆದೇಶ ಹೊರಡಿಸಿದ್ದಾರೆ.

"

ಬುಧವಾರ ಬೆಳಗ್ಗೆ 11 ಗಂಟೆಗೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ಜುಲೈ 30 ಬೆಳಗ್ಗೆ 12 ಗಂಟೆಯವರೆಗೆ ವಿಧಾನಸಭಾ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಬಹುದು ಎಂದು ವಿಧಾನಸಭೆಯಲ್ಲಿ ಇಂದು ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಘೋಷಣೆ ಮಾಡಿದ್ದು ಆಡಳಿತ ಹಿಡಿದಿರುವ ಬಿಜೆಪಿ ತನ್ನ ಅಭ್ಯರ್ಥಿಯನ್ನು ಫೈನಲ್ ಮಾಡಿದೆ.

ಉತ್ತರ ಕರ್ನಾಟಕದತ್ತ ಆಪರೇಶನ್, ಮತ್ತೆ 6 ಶಾಸಕರ ಮುಖ ಬಿಜೆಪಿ ಕಡೆಗೆ?

ನೂತನ ಸ್ಪೀಕರ್ ಆಗಿ ಬಿಜೆಪಿ ವಿರಾಜಪೇಟೆ  ಶಾಸಕ ಕೆ.ಜಿ.ಬೋಪಯ್ಯ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದ್ದು ಸಿಎಂ ಬಿ.ಎಸ್.ಯಡಿಯೂರಪ್ಪ ಬೋಪಯ್ಯ ಹೆಸರನ್ನು ಅಂತಿಮ ಮಾಡಿದ್ದಾರೆ.